ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ

ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ

ಬೆಂಗಳೂರು: ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನವನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.

ರಾಜ್ಯ ಮಹತ್ವಾಕಾಂಕ್ಷಿ ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳನ್ನು ಪ್ರಸ್ತಕ ಸಾಲಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸುವುದು. ಈ ಯೋಜೆನೆಗೆ 2ನೇ ಹಂತದ 260 ಕಿ.ಮೀ ಉದ್ದ ಗುರತ್ವ ಕಾಲುವೆ ಟಿ.ಜಿ ಹಳ್ಳಿ- ರಾಮನಗರ ಫೀಡರ್, ಮಧುಗಿರಿ ಫೀಡರ್ ಹಾಗೂ ಟಿ.ಜಿ ಗೌರೀಬಿದನೂರು ಫೀಡರ್ ಕಾಲುವೆ ಕಾಮಗಾರಿಗಳನ್ನು ಪ್ರಸ್ತಕ ಸಾಲಿನಲ್ಲಿ ಪೂರ್ಣಗೊಳಿಸಿ, ಮುಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ನೀರು ಪೂರೈಸಲು ಕ್ರಮ ಜರುಗಿಸಲು ಹಾಗೂ ಯೋಜೆನಗೆ ಉಳಿಗೆ ಕಾಮಗಾರಿಗಳನ್ನು ಹಂತ, ಹಂತವಾಗಿ ಕಾರ್ಯಗತಗೊಳಿಸಲು ಕ್ರಮವಹಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ 3,000 ಕೋಟಿ ರೂಪಾಯಿ ಅನುದಾನ ಒದಗಿಲಸಾಗುವುದು.


ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನಾ ವರದಿಗೆ ಕೇಂದ್ರ ಸರ್ಕಾರದ ಸಮಕ್ಷ ಪ್ರಾಧಿಕಾರಿಗಳ ತೀರುವಳಿಗನ್ನು ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯ ಅನುಷ್ಠಾನಕ್ಕೆ ಪ್ರಸ್ತಕ ಸಾಲಿನಲ್ಲಿ 1,000 ಕೋಟಿ ರೂಪಾಯಿ ಅನುದಾನವನ್ನು ಒದಗಿಸಲಾಗುವುದು. 

Comments

Popular posts from this blog

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು