11 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

 

11 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

ಮುಂಬೈ: 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 43 ವರ್ಷದ ತಂದೆಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಕುರಿತಂತೆ ಬಾಲಕಿ ತನ್ನ ಶಾಲೆಯ ಅಧಿಕಾರಿಗಳಿಗೆ ವಿವರಿಸಿದ್ದು, ನಂತರ ಅಧಿಕಾರಿಗಳ ಸಲಹೆ ಮೇರೆಗೆ ಅಪ್ರಾಪ್ತ ಬಾಲಕಿ ತನ್ನ ತಂದೆಯ ವಿರುದ್ಧ ದೂರು ದಾಖಲಿಸಿದ್ದಾಳೆ. ಬಾಲಕಿಯೊಂದಿಗೆ ನಡೆದ ಘಟನೆಯನ್ನು ಕೇಳಿದ ಕೌನ್ಸಿಲರ್ ಆಘಾತಕ್ಕೊಳಗಾಗಿದ್ದು, ನಂತರ ಶಾಲೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪುಣೆ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. 

ಆರೋಪಿಯನ್ನು ಬಂಧಿಸಲು ಅಧಿಕಾರಿಯೊಬ್ಬರು ವಿಶೇಷ ಪೊಲೀಸ್ ತಂಡವನ್ನು ರಚಿಸಿದ್ದು, ಇದೀಗ ತನಿಖಾ ತಂಡವು ಬಿಹಾರದಲ್ಲಿ ಆರೋಪಿಯನ್ನು ಬಂಧಿಸಿ ಪುಣೆಗೆ ಕರೆದೊಯ್ದಿದ್ದಾರೆ. ಇದೀಗ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 31 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಬಾಲಕಿಯ ಅಜ್ಜ, ಚಿಕ್ಕಪ್ಪ ಮತ್ತು ಅಪ್ರಾಪ್ತ ಹಿರಿಯ ಸಹೋದರನನ್ನು ಸಹ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Comments

Popular posts from this blog

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು