ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

 

ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ, ಬರಹಗಾರ, ಕಲಾವಿದ ಕರಣ್ ಜೋಹಾರ್ ರವಿವಾರ ಬೆಂಗಳೂರಿಗೆ ಬಂದು ಇಳಿಯಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕನ್ನಡ ಸಿನಿಮಾವೊಂದರ ಕಾರ್ಯಕ್ರಮವನ್ನು ಹೋಸ್ಟ್ ಮಾಡಲಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಸಾಕಷ್ಟು ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ನಿರೂಪಣೆ ಮಾಡಿರುವ ಅವರು ಇದೇ ಮೊದಲ ಬಾರಿಗೆ ಕನ್ನಡದ ಪ್ಯಾನ್ ಇಂಡಿಯಾ ಚಿತ್ರವೊಂದಕ್ಕೆ ಹೋಸ್ಟ್ ಮಾಡುತ್ತಿರುವುದು ಇದೇ ಮೊದಲು.

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾದ ಟ್ರೈಲರ್ ಇದೇ ರವಿವಾರ ಮಾರ್ಚ್ 27ರಂದು ಬಿಡುಗಡೆ ಆಗುತ್ತಿದ್ದು, ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಕರಣ್ ಜೋಹಾರ್ ಹೊತ್ತುಕೊಂಡಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. 

ಯಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಏ.14 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಮಾ.27ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾ ತಂಡ ಸಿದ್ಧತೆ ಮಾಡಿಕೊಂಡಿದೆ. ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.