ಕೆಎಎಸ್ ಅಧಿಕಾರಿ ರಂಗನಾಥ್‍ಗೆ ಸೇರಿದ ಒಟ್ಟು 5 ಮನೆಗಳ ಮೇಲೆ ಎಸಿಬಿ ದಾಳಿ

 

ಕೆಎಎಸ್ ಅಧಿಕಾರಿ ರಂಗನಾಥ್‍ಗೆ ಸೇರಿದ ಒಟ್ಟು 5 ಮನೆಗಳ ಮೇಲೆ ಎಸಿಬಿ ದಾಳಿ

ಬೆಂಗಳೂರು: ಕೆಎಎಸ್ ಅಧಿಕಾರಿ ರಂಗನಾಥ್‍ಗೆ ಸೇರಿದ ಒಟ್ಟು 5 ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶ ಪಡಿಸಿಕೊಂಡಿದ್ದಾರೆ.

ರಂಗನಾಥ್, ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮಗಳ ಪ್ರಧಾನ ವ್ಯವಸ್ಥಾಪಕಾಗಿದ್ದಾರೆ. ಈ ಹಿಂದೆ ಬೆಂಗಳೂರಿನ ಉತ್ತರ ತಾಲೂಕು ಉಪನೊಂದಣಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಈ ವೇಳೆ ಗೋಮಾಳ ಜಮೀನನ್ನು ನಿಯಮ ಬಾಹಿರವಾಗಿ ಖಾಸಗಿ ಯವರಿಗೆ ಪರಭಾರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಸಿಬಿ ಕೋರ್ಟ್ ಸೂಚನೆ ಮೇರೆಗೆ ಎಫ್‍ಐಆರ್ ದಾಖಲಿಸಿತ್ತು.

ನ್ಯಾಯಾಂಗ ಬಡಾವಣೆಯಲ್ಲಿರುವ ವಾಸದ ಮನೆ, ನಾಗರಬಾವಿಯಲ್ಲಿರುವ ಸಂಬಂಧಿಕರ ಮನೆ, ದೊಡ್ಡ ಬಳ್ಳಾಪುರದಲ್ಲಿರುವ ಕಲ್ಯಾಣ ಮಂಟಪ ಮತ್ತು ಟೌನ್ ಕನಕ ಶ್ರೀ ಟ್ರಸ್ಟ್ ಕಚೇರಿ, ಅಕ್ಷರ ಪಬ್ಲಿಕ್ ಸ್ಕೂಲ್, ಉತ್ತರ ತಾಲೂಕು ವಿಭಾಗದ ಕಚೇರಿ, ಮೇಲೆ ದಾಳಿ ಮಾಡಲಾಗಿದೆ. 42 ಎಸಿಬಿ ಅಧಿಕಾರಿಗಳು 5 ತಂಡಗಳಾಗಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಂದಿನ ತಹಶಿಲ್ದಾರ್ ಗಮನಕ್ಕೆ ಬಾರದೇ, ದಾಖಲೆಗಳನ್ನು ಪರಿಶೀಲನೆ ಮಾಡದೇ ಕೇವಲ ಮೂರೇ ದಿನಗಳಲ್ಲಿ ಗೋಮಾಳ ಜಮೀನನ್ನು ಪರಭಾರೆ ಮಾಡಿರುವ ಆರೋಪ ರಂಗನಾಥ್ ಮೇಲಿದೆ.

Comments

Popular posts from this blog

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು