ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

 

ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ತಮ್ಮ ದಾಖಲೆಗಳನ್ನು ಮುರಿದುಕೊಂಡು ನಿರಾತಂಕವಾಗಿ ಮುನ್ನುಗ್ಗುತ್ತಿದ್ದಾರೆ ರಾಜಮೌಳಿ.  ಈ ಹಿಂದಿನ ಬಾಹುಬಲಿ ಚಿತ್ರಕ್ಕಿಂತಲೂ ಈ ಬಾರಿ ಕಲೆಕ್ಷನ್ ವೇಗ ಜೋರಾಗಿದೆಯಂತೆ. ಹಾಗಾಗಿ ರಿಲೀಸ್ ಆದ ಮೂರೇ ಮೂರು ದಿನಕ್ಕೆ 500 ಕೋಟಿ ಹಣ ಹರಿದು ಬಂದಿದೆ ಎನ್ನುತ್ತಾರೆ ಸಿನಿ ಲೆಕ್ಕಚಾರ ಪಂಡಿತರು.

ವಿಶ್ವದಾದ್ಯಂತ ಈ ಸಿನಿಮಾ ರಿಲೀಸ್ ಆಗಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ, ವೀಕೆಂಡ್ ನಲ್ಲಿ ವಿದೇಶದಲ್ಲೂ ಸಖತ್ ಕಮಾಯಿ ಮಾಡಿದೆಯಂತೆ. ಇದೇ ವೇಗದಲ್ಲೇ ಒಂದು ವಾರ ಪ್ರದರ್ಶನ ಕಂಡರೆ, ಒಂದು ವಾರದಲ್ಲಿ ಸಾವಿರ ಕೋಟಿ ಹಣ ಗಳಿಸಿದ ಮೊದಲ ಚಿತ್ರ ಇದಾಗಲಿದೆ. 

ಈ ಸಿನಿಮಾ ಮೊದಲ ದಿನ ಕರ್ನಾಟಕದಲ್ಲಿ 14.5 ಕೋಟಿ ಗಳಿಕೆ ಮಾಡಿದ್ದರೆ, ಆಂಧ್ರ ಪ್ರದೇಶದಲ್ಲಿ 75 ಕೋಟಿ ಗಳಿಸಿತ್ತು. ತಮಿಳು ನಾಡಿನಲ್ಲಿ 10 ಕೋಟಿ, ಕೇರಳದಲ್ಲಿ 4 ಕೋಟಿ, ಹಿಂದಿಯಲ್ಲಿ 14 ಕೋಟಿ, ಉತ್ತರ ಭಾರತದಲ್ಲಿ 25 ಕೋಟಿ, ಹೀಗೆ ಭಾರತದಲ್ಲೇ ಮೊದಲ ದಿನ ಆರ್.ಆರ್.ಆರ್ ಗಳಿಸಿದ ಒಟ್ಟು ಮೊತ್ತ 156 ಕೋಟಿ ಆಗಿತ್ತು. ವಿದೇಶದಲ್ಲೂ ಕೂಡ ಹಿಂದೆ ಬಿದ್ದಿರಲಿಲ್ಲ. ಯುಎಸ್ ನಲ್ಲೇ 42 ಕೋಟಿ ಕಲೆಕ್ಷನ್ ಮಾಡಿತ್ತು. ಬೇರೆ ಬೇರೆ ದೇಶಗಳಿಂದ 25 ಕೋಟಿ ಬಂದಿತ್ತು. ವಿಶ್ವದಾದ್ಯಂತ ಮೊದಲ ದಿನದ ಒಟ್ಟು ಕಲೆಕ್ಷನ್ 223 ಕೋಟಿ ಆಗಿತ್ತು. 

ಹಿಂದಿ ವರ್ಷನ್ ಒಂದರಲ್ಲೇ ಶುಕ್ರವಾರ 19 ಕೋಟಿ, ಶನಿವಾರ 24 ಕೋಟಿ ಹಾಗೂ ಭಾನುವಾರ 31.50 ಕೋಟಿ ಏರಿಕೆ ಕಂಡಿದೆ. ಹೀಗಾಗಿ ಶನಿವಾರ ಮತ್ತು ಭಾನುವಾರ ಎರಡನೇ ದಿನದ ಗಳಿಕೆ ವೀಕೆಂಡ್ ಕಾರಣಕ್ಕಾಗಿ ಮತ್ತಷ್ಟು ಏರಿಕೆ ಕಂಡು ಮೂರೇ ದಿನದಲ್ಲಿ 500 ಕೋಟಿ ರೂಪಾಯಿಗಳನ್ನು ಈ ಸಿನಿಮಾ ಬಾಚಿದೆ.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.