ತರಗತಿಯೊಳಗೆ ಹಿಜಾಬ್ ಧರಿಸಲು ನಿಷೇಧ: ಹೋಳಿ ಹಬ್ಬ ನಂತರ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

 ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ಅವಕಾಶವಿಲ್ಲ ಎಂದು ಕರ್ನಾಟಕ ಸರ್ಕಾರದ ಆದೇಶವನ್ನು ಪುರಸ್ಕರಿಸಿ ತೀರ್ಪು ನೀಡಿದ ಹೈಕೋರ್ಟ್ ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯನ್ನು ಹೋಳಿ ಹಬ್ಬದ ನಂತರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ವದೆಹಲಿ: ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ(Hijab row) ಅವಕಾಶವಿಲ್ಲ ಎಂದು ಕರ್ನಾಟಕ ಸರ್ಕಾರದ ಆದೇಶವನ್ನು ಪುರಸ್ಕರಿಸಿ ತೀರ್ಪು ನೀಡಿದ ಹೈಕೋರ್ಟ್ ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯನ್ನು ಹೋಳಿ ಹಬ್ಬದ ನಂತರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತ್ವತ್ವದ ನ್ಯಾಯಪೀಠ ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರ ಅರ್ಜಿ ಸಲ್ಲಿಕೆಯನ್ನು ಪುರಸ್ಕರಿಸಿ ಸದ್ಯದಲ್ಲಿಯೇ ಪರೀಕ್ಷೆಗಳು ಇರುವುದರಿಂದ ತುರ್ತು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.ಹಲವು ವಿದ್ಯಾರ್ಥಿನಿಯರಿಗೆ ಈಗ ಪರೀಕ್ಷೆಯ ಸಮಯ, ಹೀಗಾಗಿ ಹಿಜಾಬ್ ಅರ್ಜಿಯನ್ನು ತುರ್ತಾಗಿ ನಡೆಸಬೇಕೆಂದು ಹಿರಿಯ ವಕೀಲ ಸಂಜಯ್ ಹೆಗ್ಡೆ ನ್ಯಾಯಪೀಠದ ಮುಂದೆ ಮನವಿ ಮಾಡಿಕೊಂಡಿದ್ದಾರೆ. ನಮಗೆ ಸ್ವಲ್ಪ ಸಮಯ ಕೊಡಿ, ನೋಡೋಣ, ಹೋಳಿ ಹಬ್ಬದ ನಂತರ ಅರ್ಜಿ ವಿಚಾರಣೆ ನಡೆಸೋಣ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.ಸಂವಿಧಾನದ ವಿಧಿ 25ರಡಿಯಲ್ಲಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ನಿನ್ನೆ ತೀರ್ಪು ನೀಡಿತ್ತು. ಉಡುಪಿಯ ಸರ್ಕಾರಿ ಪದವಿಪೂರ್ವ ಹೆಣ್ಣುಮಕ್ಕಳ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವುದು ಒಂದು ಕಾರಣಬದ್ಧ ನಿರ್ಬಂಧವಾಗಿದ್ದು ಸಾಂವಿಧಾನಿಕವಾಗಿ ಅನುಮತಿಬದ್ಧವಾಗಿದ್ದು ವಿದ್ಯಾರ್ಥಿಗಳು ಅದಕ್ಕೆ ಆಕ್ಷೇಪ ಸಲ್ಲಿಸಲು ಸಾಧ್ಯವಿಲ್ಲ ಎಂದು ನಿನ್ನೆ ಹೈಕೋರ್ಟ್ ಹೇಳಿದೆ.


Comments

Popular posts from this blog

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ