ಸಾರಿಗೆ ಬಸ್ ಗಾಲಿಗೆ ಸಿಲುಕಿ ಬೈಕ್ ಸವಾರ ಸಾವು

 

ಸಾರಿಗೆ ಬಸ್ ಗಾಲಿಗೆ ಸಿಲುಕಿ ಬೈಕ್ ಸವಾರ ಸಾವು

ರಾಯಚೂರು: ಜಿಲ್ಲೆಯ ಸಿಂಧನೂರಿನ ಗಂಗಾವತಿ ರಸ್ತೆಯಲ್ಲಿ ಬೈಕ್ ಸವಾರ ಬಸ್ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಉದಯ್(25) ಮೃತ ಬೈಕ್ ಸವಾರ. ಎರಡು ಬೈಕ್‍ಗಳ ನಡುವೆ ಡಿಕ್ಕಿಯಾಗಿ, ಮುಂದೆ ಬಂದ ಬಸ್ ಗಾಲಿಗೆ ಯುವಕ ಸಿಲುಕಿ ಸಾವನ್ನಪ್ಪಿದ್ದಾನೆ. ಇನ್ನೋರ್ವ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸಿಂಧನೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುಮಾಸ್ತನಾಗಿದ್ದ ಉದಯ್ ಏಳು ತಿಂಗಳ ಕೆಳಗೆ ಮದುವೆಯಾಗಿದ್ದ. ಪತ್ನಿ ತವರುಮನೆ ಕೊಪ್ಪಳ ಜಿಲ್ಲೆಯ ಕಾರಟಗಿಗೆ ಬೈಕ್‍ನಲ್ಲಿ ಹೊರಟಿದ್ದ ವೇಳೆ ಅಪಘಾತ ನಡೆದಿದೆ. 

Raichuru

ಅಪಘಾತದ ದೃಶ್ಯ ಹತ್ತಿರದ ಪೆಟ್ರೋಲ್ ಬಂಕ್‍ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಸಿಂಧನೂರು ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ಮೃತದೇಹವನ್ನ ಇರಿಸಲಾಗಿದೆ.


Comments

Popular posts from this blog

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ