ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ, ಸಿದ್ದರಾಮಯ್ಯ ಧೋರಣೆ- ಬಿಜೆಪಿ ತಿರುಗೇಟು

 

ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ, ಸಿದ್ದರಾಮಯ್ಯ ಧೋರಣೆ- ಬಿಜೆಪಿ ತಿರುಗೇಟು

- ಹಿಜಬ್ ಧರಿಸಲು ಅವಕಾಶ ನೀಡುವಂತೆ ಸಿದ್ದರಾಮಯ್ಯ ಏಕಪಾತ್ರಾಭಿನಯ

ಬೆಂಗಳೂರು: ಹಿಜಬ್ ಕುರಿತಾಗಿ ನಾನು ಹೇಳಿರುವುದನ್ನು ತಿರುಚಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಬಿಜೆಪಿ ಸಾಲು, ಸಾಲು ಟ್ವೀಟ್ ಮಾಡುವ ಮೂಲಕವಾಗಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದೆ.

ಟ್ವೀಟ್‍ನಲ್ಲಿ ಏನಿದೆ?: ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತಿದೆ ಸಿದ್ದರಾಮಯ್ಯ ಅವರ ಧೋರಣೆ. ಈ ಹಿಂದೆ ಹಲವು ಮಠಾಧೀಶರ ವಿರುದ್ಧ ಅಗೌರವಯುತವಾಗಿ ನಡೆದುಕೊಂಡಿದ್ದರು. ಸಿದ್ದರಾಮಯ್ಯ ಅವರು ಈಗ ಸ್ವಾಮೀಜಿಗಳ ಮೌನವನ್ನೂ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಸ್ವಾಮೀಜಿಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಈ ಹಿಂದೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲ ಯತ್ನ ನಡೆಸಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಸ್ವಾಮೀಜಿಗಳೇ ಮನವಿ ನೀಡಿದ್ದರು ಎಂಬ ಸುಳ್ಳು ಹೇಳಿಕೆಯನ್ನು ರಾಜ್ಯದ ಜನ ಮರೆತಿಲ್ಲ ಎಂದು ಕಿಡಿಕಾರಿದ್ದಾರೆ. 

ಬಿಎಸ್‍ವೈ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಮಠಮಂದಿರಗಳಿಗೆ ಉದಾರ ನೆರವು ನೀಡಿದ್ದರು. ಅಂದು ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸಂವಿಧಾನದ ಮುಂದೆ ಎಲ್ಲರೂ ಸಮಾನರು ಎಂದು ವಾದಿಸುವ ಸಿದ್ದರಾಮಯ್ಯನವರಿಗೆ ಹಿಂದುಗಳನ್ನು ವಿರೋಧಿಸಲು ಯಾವ ಕಾನೂನು ಅಡ್ಡಿ ಬರುವುದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. 

ಹೈಕೋರ್ಟ್ ತೀರ್ಪಿನ ಬಳಿಕ ಹಿಜಬ್ ವಿವಾದ ತಣ್ಣಗಾಗಿತ್ತು. ಆದರೆ ಹಿಜಬ್ ಧರಿಸಲು ಅವಕಾಶ ನೀಡಿ ಎಂದು ಸಿದ್ದರಾಮಯ್ಯ ಈಗ ಏಕಪಾತ್ರಾಭಿನಯ ಆರಂಭಿಸಿದ್ದಾರೆ. ಕೋಮು ಸೌಹಾರ್ದ ಎಂಬುದು ಈ ದೇಶದಲ್ಲಿ ಕನಸಾಗಿ ಉಳಿದಿರುವುದಕ್ಕೆ ಸಿದ್ದರಾಮಯ್ಯ ಅವರಂಥಹ ಅವಕಾಶವಾದಿ ರಾಜಕಾರಣಿಗಳೇ ಕಾರಣ ಎಂದು ಹೇಳಿದ್ದಾರೆ.

Comments

Popular posts from this blog

ಆಸ್ತಿ ವಿಚಾರಕ್ಕೆ ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಪಾಪಿ ಮಗ