ಕೇಜ್ರಿವಾಲ್ ಮನೆಗೆ ದುಷ್ಕರ್ಮಿಗಳ ದಾಳಿ – ಸಿಸಿಟಿವಿ, ಭದ್ರತಾ ಗೋಡೆ ಧ್ವಂಸ

 

ಕೇಜ್ರಿವಾಲ್ ಮನೆಗೆ ದುಷ್ಕರ್ಮಿಗಳ ದಾಳಿ – ಸಿಸಿಟಿವಿ, ಭದ್ರತಾ ಗೋಡೆ ಧ್ವಂಸ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಮಧ್ಯಾಹ್ನ ದಾಳಿ ನಡೆಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.

ಕೇಜ್ರಿವಾಲ್ ಅವರ ಮನೆ ಮೇಲೆ ದಾಳಿ ನಡೆಸಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ತಿಳಿಸಿರುವ ಸಿಸೋಡಿಯಾ ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ ಎಂದು ಹೇಳಿದ್ದಾರೆ. 

ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ತಡೆಗೋಡೆ ಹಾಗೂ ಸಿಸಿಟಿವಿ ಕ್ಯಾಮೆರಾಗಳು ಧ್ವಂಸಗೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.