ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.
ಪೆಟ್ರೋಲ್ ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕೆಂದು ಶಿವಮೊಗ್ಗ ಜಿಲ್ಲಾ NSUI ಈ ಮೂಲಕ ಆಗ್ರಹಿಸುತ್ತದೆ. ಕೇಂದ್ರದಲ್ಲಿ NDA ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಅಗತ್ಯವಸ್ತುಗಳ ಬೆಲೆ ಏರಿಕೆ ಆಗುತ್ತಲೇ ಇದೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆಮಾಡುವ ಬದಲು ಮನಸ್ಸಿಗೆ ಬಂದಂತೆ ಹೆಚ್ಚಳ ಮಾಡುತ್ತಲೇ ಬಂದಿದೆ ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಉಂಟಾಗುತ್ತಿದೆ.
ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದಾಗಿ ದೇಶದ ಅರ್ಥ ವ್ಯವಸ್ಥೆ ಹಾಳಾಗಿದ್ದು ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟದಾಯಕ ಪರಿಸ್ಥಿತಿ ಇರುವಾಗಲೇ ಕೋವಿಡ್ ವೈರಸ್ನ ದಾಳಿಯಿಂದ ಜನರು ಮತ್ತಷ್ಟು ಹೈರಾಣ ರಗಿದ್ದಾರೆ ಅಗತ್ಯವಸ್ತುಗಳ ಬೆಲೆ ದಿನೇದಿನೇ ಹೆಚ್ಚಾಗುತ್ತಿರುವುದರಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದೇ ದುಸ್ತರವಾಗುತ್ತಿದೆ
ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಉಕ್ರೇನ್ ರಷ್ಯಾ ಇದ್ದದ ನೆಪದಲ್ಲಿ ಮತ್ತೆ ಮತ್ತೆ ಇಂಧನ ಬೆಲೆ ಹೆಚ್ಚಳ ಮಾಡುತ್ತಿದೆ
ಅಗತ್ಯವಸ್ತುಗಳ ಬೆಲೆ ನಿಯಂತ್ರಿಸಿ ಜನಸಾಮಾನ್ಯರ ಬದುಕು ಸುಗಮವಾಗಿ ಸಾಗುವಂತೆ ಮಾಡಬೇಕಿದ್ದ ಕೇಂದ್ರ ಸರ್ಕಾರ ಬೆಲೆಯೇರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಕೂಡಲೇ ಜನವಿರೋಧಿ ಕೇಂದ್ರ ಸರ್ಕಾರವನ್ನು ವಜಾ ಮಾಡುವಂತೆ ಜಿಲ್ಲಾ NSUI ಈ ಮೂಲಕ ಆಗ್ರಹಿಸುತ್ತದೆ.
ಈ ಸಂದರ್ಭದಲ್ಲಿ NSUIಜಿಲ್ಲಾಧ್ಯಕ್ಷ ವಿಜಯ ,ನಗರ ಅಧ್ಯಕ್ಷ ಚರಣ್ ,ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ,ರವಿ ಕಾಟಿಕೆರೆ ಹಾಗೂ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ,ಯುವ ಮುಖಂಡ ಸಿ ಜಿ ಮಧುಸೂದನ್ ,ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರ ಅಧ್ಯಕ್ಷರಾದ ಮುಹಮ್ಮದ್ ನಿಯಾಲ್ , ಕಾಂಗ್ರೆಸ್ ಮುಖಂಡರುಗಳಾದ ಜಗದೀಶ್ , ಪೂರ್ಣೇಶ್ ಕುಮಾರ್ ,ಅಕ್ಬರ್ ಮತ್ತು ಯುವ ಕಾಂಗ್ರೆಸ್ ನ ಗಿರೀಶ್,ಮಲವಗೊಪ್ಪ ಶಿವು ,ಧನರಾಜ್ ,ಆಕಾಶ್.
NSUIನ ಚಂದ್ರೋಜಿ ರಾವ್ ,ರವಿ ,ಕಿರಣ್ ,ಸಾಗರ್, ಸುಹಾಸ್ ,ಮಂಜು ,ವಿಕ್ರಂ,ಭರತ್ ಹಾಗೂ ನೂರಾರು ಯುವಕರು ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು
Comments
Post a Comment