ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದ ಚಿಕ್ಕಮಗಳೂರಿನ ಶ್ರೀಗಂಧ ಬೆಳೆಗಾರ
ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದ ಚಿಕ್ಕಮಗಳೂರಿನ ಶ್ರೀಗಂಧ ಬೆಳೆಗಾರ
ಚಿಕ್ಕಮಗಳೂರು: ಹೆದ್ದಾರಿ ಅಗಲಿಕರಣದ ವೇಳೆ ರೈತರು ಜಮೀನು ಕಳೆದುಕೊಳ್ಳುತ್ತಾರೆ. 62 ಕೋಟಿ ಪರಿಹಾರ ಕೊಡಬೇಕಾದ ಜಾಗದಲ್ಲಿ ಎರಡೂವರೆ ಲಕ್ಷ ನೀಡಲು ಸರ್ಕಾರ ಮುಂದಾಗಿದೆ. ಈ ಕ್ರಮವನ್ನು ವಿರೋಧಿಸಿ ಶ್ರೀಗಂಧದ ಬೆಳೆಗಾರರು ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದೊಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಬೆಳಗಾರರು ಇಂದು ಸೀರೆಂಜ್‍ನಲ್ಲಿ ರಕ್ತ ತೆಗೆದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೂಕ್ತ ಪರಿಹಾರ ನೀಡ ಬೇಕು. 22 ರೈತರಿಗೆ 62 ಕೋಟಿ ಪರಿಹಾರ ಬರಬೇಕು. ಎರಡೂವರೆ ಲಕ್ಷ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಹೆದ್ದಾರಿ ಅಗಲೀಕರಣದ ವೇಳೆ ಜಮೀನು ಕಳೆದುಕೊಳ್ಳಲಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ಪರಿಹಾರ ನೀಡಲು ಒತ್ತಾಯ ಮಾಡಲಾಗಿದೆ.
Comments
Post a Comment