ಕೆನ್ನೆಗುಳಿ ಹುಡುಗ ದಿಗಂತ್ ಚಿತ್ರಕ್ಕೆ ಇಬ್ಬರು ಮಹಿಳೆಯರ ಉಸ್ತುವಾರಿ

 

ಕೆನ್ನೆಗುಳಿ ಹುಡುಗ ದಿಗಂತ್ ಚಿತ್ರಕ್ಕೆ ಇಬ್ಬರು ಮಹಿಳೆಯರ ಉಸ್ತುವಾರಿ

ನ್ನಡ ಸಿನಿಮಾ ರಂಗಕ್ಕೆ ಮತ್ತೋರ್ವ ನಿರ್ದೇಶಕಿಯ ಪ್ರವೇಶವಾಗಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ ‘ಅಂತು ಇಂತು’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು, ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ ರಾಜ್, ಬೃಂದಾ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಲಿದ್ದಾರೆ. ದಿಗಂತ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಲಿರುವುದು ವಿಶೇಷ.

ಈ ಕುರಿತು ಮಾತನಾಡಿರುವ ಬೃಂದಾ, ‘ನಾನು ಮೂಲತಃ ಮೈಸೂರಿವಳು. ರಂಗ ಕಲಾವಿದೆ. ಇಪ್ಪತ್ತೈದು ವರ್ಷಗಳಿಂದ ಕೆನಡಾದಲ್ಲಿದ್ದೀನಿ. ಅಲ್ಲೇ ನಾನು ಹಾಗೂ ನನ್ನ ಪತಿ ಮುರಳಿಧರ್ ನಾಟಕ ಸೇರಿದಂತೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ. ನಾನು ಈ ಹಿಂದೆ ನಾಟ್ ನಾಟ್ ಎಂಬ ಇಂಗ್ಲಿಷ್ ಚಿತ್ರ ನಿರ್ದೇಶಿಸಿದ್ದೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಇದು ಸ್ವದೇಶದಿಂದ ವಿದೇಶಕ್ಕೆ ಹೋಗಿ ನೆಲೆಸಿರುವವರ ಕಥೆ‌. ನಾವು ಎಲ್ಲೇ ಇದ್ದರೂ ನಮ್ಮ ಹುಟ್ಟಿದ ಊರಿನ ಮಮತೆ ಸದಾ ಸೆಳೆಯುತ್ತಿರುತ್ತದೆ. ಈ ರೀತಿ ಭಾವನಾತ್ಮಕ ಕಥೆಯುಳ್ಳ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ’ ಎಂದರು. 

‘ನಾನು 25 ವರ್ಷಗಳಿಂದ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ  ಅಭಿನಯಿಸಿದ್ದೇನೆ. ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ಮಾಣ ಕೂಡ ಮಾಡಿದ್ದೇನೆ. ಇದೇ ಮೊದಲ ಬಾರಿಗೆ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದೇನೆ. ನಿರ್ದೇಶಕಿ  ಬೃಂದಾ ಅವರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು’ ಎನ್ನುವುದು ಜಯಶ್ರೀ ರಾಜ್ ಮಾತು.

ಅಂದಹಾಗೆ ಈ ಸಿನಿಮಾದಲ್ಲಿ ದಿಗಂತ್ ಭಾರತದಿಂದ ಕೆನಡಾಕ್ಕೆ ಬಂದ ಹುಡುಗನ ಪಾತ್ರ ಮಾಡುತ್ತಿದ್ದಾರೆ. ಗಿರಿಜಾ ಲೋಕೇಶ್, ರವಿಶಂಕರ್ ಗೌಡ ಪ್ರಮುಖ ಪಾತ್ರದಲ್ಲಿ ಇರಲಿದ್ದಾರೆ‌. ಕೆನಡಾದ ಸ್ಥಳಿಯ ತಂತ್ರಜ್ಞರು ಇದರಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ‌.

Comments

Popular posts from this blog

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ