ರೇಷನ್‍ಗಾಗಿ ಇನ್ಮುಂದೆ ಕ್ಯೂನಲ್ಲಿ ನಿಲ್ಲುವ ಅಗತ್ಯವಿಲ್ಲ: ಭಗವಂತ್ ಮಾನ್
ರೇಷನ್‍ಗಾಗಿ ಇನ್ಮುಂದೆ ಕ್ಯೂನಲ್ಲಿ ನಿಲ್ಲುವ ಅಗತ್ಯವಿಲ್ಲ: ಭಗವಂತ್ ಮಾನ್

ಚಂಡೀಗಢ: ಉತ್ತಮ ಗುಣಮಟ್ಟದ ಪಡಿತರವನ್ನು ತಮ್ಮ ಮನೆಯ ಬಾಗಿಲಿಗೆ ತಲುಪಿಸುವುದರಿಂದ ಬಡವರು ಇನ್ನು ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.
ಈ ಕುರಿತಂತೆ ಆಮ್ ಆದ್ಮಿ ಪಕ್ಷ ವೀಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ವೀಡಿಯೋದಲ್ಲಿ ಭಗವಂತ್ ಮಾನ್ ಅವರು, ಪಡಿತರ ಯೋಜನೆಯನ್ನು ಮನೆ ಬಾಗಿಲಿಗೆ ತಲುಪಿಸಲು ಎಎಪಿ ಸರ್ಕಾರ ನಿರ್ಧರಿಸಿದೆ. ಈ ಯೋಜನೆಯಡಿ ಉತ್ತಮ ಗುಣಮಟ್ಟದ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಯಾರೂ ಕೆಲಸ ಬಿಟ್ಟು ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ನಮ್ಮ ಅಧಿಕಾರಿಗಳು ಫಲಾನುಭವಿಗಳಿಗೆ ಫೋನ್ ಕರೆ ಮಾಡುತ್ತಾರೆ ಮತ್ತು ಅವರ ಅನುಕೂಲಕ್ಕೆ ಅನುಗುಣವಾಗಿ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿಯೂ ಈ ಯೋಜನೆಯನ್ನು ಪ್ರಾರಂಭಿಸಿದ್ದರು, ಆದರೆ ದುರದೃಷ್ಟವಶಾತ್ ದೆಹಲಿಯಲ್ಲಿ ಈ ಯೋಜನೆಯನ್ನು ನಿಲ್ಲಿಸಲಾಯಿತು. ಆದರೆ ಪಂಜಾಬ್‍ನಲ್ಲಿ ನಾವು ಈ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ ಮತ್ತು ಯಶಸ್ವಿಯಾಗಿ ನಡೆಸುತ್ತೇವೆ ಎಂದು ಹೇಳಿದ್ದಾರೆ.
Comments
Post a Comment