ಕಾರ್‌ಗೆ ಬಸ್ ಡಿಕ್ಕಿ- ನಾಲ್ವರು ವಿದ್ಯಾರ್ಥಿಗಳು ಸಾವು


ಕಾರ್‌ಗೆ ಬಸ್ ಡಿಕ್ಕಿ- ನಾಲ್ವರು ವಿದ್ಯಾರ್ಥಿಗಳು ಸಾವು

ಹಾಸನ: ಸಾರಿಗೆ ಬಸ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಘಟನೆ ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಬಳಿ ನಡೆದಿದೆ.

ಸಾರಿಗೆ ಬಸ್ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿರುವ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಮೃತರು ಬೇಲೂರಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ.

ನಡೆದಿದ್ದೇನು?: ಪರೀಕ್ಷೆ ಮುಗಿದ ನಂತರ ಗೆಳೆಯನೊಬ್ಬನ ಆಲ್ಟೋ ಕಾರಿನಲ್ಲಿ ಐವರು ವಿದ್ಯಾರ್ಥಿಗಳು ಹೊರಟಿದ್ದರು. ವಿದ್ಯಾರ್ಥಿಗಳು ಬೇಲೂರಿನಿಂದ ಹಾಸನದ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಹಾಸನದಿಂದ ಚಿಕ್ಕಮಗಳೂರಿಗೆ ಬಸ್ ಬರುತ್ತಿತ್ತು. ಈ ವೇಳೆ ಬಸ್, ಕಾರಿಗೆ ಡಿಕ್ಕಿಯಾಗಿದೆ. ಆಗ ಕಾರಿನಲ್ಲಿದ್ದ  ನಾಲ್ವರ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ಮೃತರೆಲ್ಲರು ಎಲ್ಲರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ.

Comments

Popular posts from this blog

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು