ತುಮಕೂರಲ್ಲಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟು ಬಂದ್


ತುಮಕೂರಲ್ಲಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟು ಬಂದ್

ತುಮಕೂರು: ಹಿಜಬ್ ವಿವಾದದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.

ಹೈಕೋರ್ಟ್ ತೀರ್ಪು ಸಂಬಂಧಿಸಿದಂತೆ ಮುಸ್ಲಿಂ ವ್ಯಾಪಾರಸ್ಥರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಿದ್ದಾರೆ. ಕಾಲ್ ಟ್ಯಾಕ್ಸ್ ಸರ್ಕಲ್, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿ ಗೇಟ್, ಕುಣಿಗಲ್ ರಿಂಗ್ ರಸ್ತೆಗಳಲ್ಲಿನ ಪ್ರಮುಖ ಗ್ಯಾರೇಜ್, ಆಟೋ ಮೊಬೈಲ್ಸ್ ಅಂಗಡಿಗಳು ಬಂದ್ ಆಗಿದ್ದು, ಉಳಿದಂತೆ ಯಥಾಸ್ಥಿತಿಯಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದೆ. 

ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ ತೀರ್ಪು ನೀಡಿದ್ದು, ಸರ್ಕಾರದ ವಸ್ತ್ರ ಸಂಹಿತೆಯನ್ನು ಎತ್ತಿ ಹಿಡಿದಿದೆ. ಹೀಗಾಗಿ ನಮಗೆ ಕಾನೂನಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮುಸಲ್ಮಾನ್ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. 

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.