ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ

 

ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ


ಚಂಡೀಗಢ: ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಟ್ವೀಟ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಚರಾಜ್ಯಗಳ ಸೋಲಿನ ಬಳಿಕ 5 ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಜಾಗೊಳಿಸಿದ ಮರುದಿನ ಟ್ವಿಟ್ಟರ್‌ನಲ್ಲಿ ರಾಜೀನಾಮೆಯ ಪತ್ರವನ್ನು ಶೇರ್ ಮಾಡಿಕೊಂಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?:
ಕಾಂಗ್ರೆಸ್ ಅಧ್ಯಕ್ಷರ ಅಪೇಕ್ಷೆಯಂತೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿ ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.

https://twitter.com/sherryontopp/status/1503951025853526019/photo/1

ನಿನ್ನೆ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಟ್ವೀಟ್ ಮಾಡಿ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೇರಿದಂತೆ ಮಣಿಪುರ, ಗೋವಾ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. 

ಪಂಜಾಬ್‍ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಹೀನಾಯವಾಗಿ ಸೋಲು ಅನುಭವಿಸಿತು. ಪಂಜಾಬ್‍ನಲ್ಲಿ ಕಾಂಗ್ರೆಸ್ 18 ಸ್ಥಾನ ಗೆದ್ದರೆ, ಉತ್ತರಾಖಂಡದಲ್ಲಿ 19, ಗೋವಾದಲ್ಲಿ 11, ಮಣಿಪುರದಲ್ಲಿ 5 ಮತ್ತು ಉತ್ತರ ಪ್ರದೇಶದಲ್ಲಿ ಕೇವಲ 2 ಸ್ಥಾನ ಗೆದ್ದುಕೊಂಡು ಕಾಂಗ್ರೆಸ್ ಮುಖಭಂಗ ಅನುಭವಿಸಿತ್ತು.

Comments

Popular posts from this blog

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು