‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ಕ್ಕೆ ಪುನೀತ್ ರಾಜ್ ಕುಮಾರ್ ರಾಯಭಾರಿ

 

‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ಕ್ಕೆ ಪುನೀತ್ ರಾಜ್ ಕುಮಾರ್ ರಾಯಭಾರಿ

ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು ನಟ ಪುನೀತ್ ರಾಜ್ ಕುಮಾರ್. ಈ ಮೂಲಕ ಲಕ್ಷಾಂತರ ಜನರಿಗೆ ಪ್ರೇರಣೆಯೂ ಆಗಿದ್ದರು. ಹಾಗಾಗಿ ಪುನೀತ್ ರಾಜ್ ಕುಮಾರ್ ಅವರನ್ನು ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅರಿವು ಅಭಿಯಾನದ ರಾಯಭಾರಿಯನ್ನಾಗಿ ಮಾಡಲಾಗಿದೆ. ಮಂಗಳವಾರವಷ್ಟೇ ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ. 

ಆರೋಗ್ಯ ಇಲಾಖೆ, ಡಾ.ರಾಜ್ ಕುಮಾರ್ ಟ್ರಸ್ಟ್ ಮತ್ತು ಎಸ್ಸಿರ್ಲಾ ವಿಷನ್ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅಭಿಯಾನಕ್ಕೆ ಚಾಲನೆ ನೀಡಿದರು. ತಮ್ಮ ಮೇಲೆ ಪುನೀತ್ ಅವರ ಪ್ರಭಾವ ಹೇಗೆ ಆಗಿದೆ ಎನ್ನುವ ಕುರಿತು ಈ ಸಂದರ್ಭದಲ್ಲಿ ಮಾತನಾಡಿದರು. ಪ್ರತಿ ಸಲವೂ ಪುನೀತ್ ಅವರ ಹೆಸರಿನ ಕಾರ್ಯಕ್ರಮಕ್ಕೆ ಬಂದಾಗ ನನಗೆ ಹೊಸ ಚೈತನ್ಯ ಬರಲಿದೆ’ ಎಂದರು.

ಈ ಕಾರ್ಯಕ್ರಮದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಭಾಗಿಯಾಗಿದ್ದರು. ಈ ಅಭಿಯಾನದ ಕುರಿತು ಸುದೀರ್ಘ ಟ್ವಿಟ್ ಮಾಡಿರುವ ಅಶ್ವಿನಿ, ‘ಇದು ಡಾ|| ಪುನೀತ್ ಅವರ ಸಾಮಾಜಿಕ ಕಳಕಳಿ, ಅವಕಾಶ ವಂಚಿತರಿಗೆ ದೃಷ್ಟಿಯನ್ನು ಕಲ್ಪಿಸುವ ಸಲುವಾಗಿ ಇದ್ದ ಬದ್ಧತೆ, ದೂರದೃಷ್ಠಿತ ಹಾಗೂ ನಿಷ್ಠೆಗೆ ನಾವು ಸಲ್ಲಿಸುವ ಭಾವಪೂರ್ಣ ಗೌರವ. ಡಾ|| ರಾಜ್‌ಕುಮಾರ್ ಟ್ರಸ್ಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್ಸಿಲಾರ್ ವಿಷನ್ ಪ್ರತಿಷ್ಠಾನ ಇವರ ಸಹಭಾಗಿತ್ವದಲ್ಲಿ ‘ನಮ್ಮ ದೃಷ್ಟಿ – ನಮ್ಮ ಕರ್ನಾಟಕ’ ಅರಿವು ಅಭಿಯಾನವನ್ನು ನೆನ್ನೆ ಕಾರ್ಯಾರಂಭ ಮಾಡಲಾಯಿತು’ ಎಂದು ಬರೆದುಕೊಂಡಿದ್ದಾರೆ. 

ಅಲ್ಲದೇ, ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ನಟ ರಾಘವೇಂದ್ರ ರಾಜ್ ಕುಮಾರ್, ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಉಪಸ್ಥಿತರಿದ್ದರು.

Comments

Popular posts from this blog

ಆಸ್ತಿ ವಿಚಾರಕ್ಕೆ ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಪಾಪಿ ಮಗ