ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಸಲ್ಲಿಸಿದ ಶ್ರೀಲಂಕಾ
ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಸಲ್ಲಿಸಿದ ಶ್ರೀಲಂಕಾ

ಕೊಲೊಂಬೋ: ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನೆರವು ನೀಡಿದ ಭಾರತಕ್ಕೆ ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಧನ್ಯವಾದವನ್ನು ಸಲ್ಲಿಸಿದ್ದಾರೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ ಶ್ರೀಲಂಕಾದ ಅಧ್ಯಕ್ಷ, ಆಹಾರ ಮತ್ತು ಔಷಧಿ ಸೇರಿದಂತೆ ಅಗತ್ಯ ಸರಕುಗಳ ಆಮದುಗಾಗಿ ಯುಡಿಎಸ್ 1 ಬಿಲಿಯನ್ ಕ್ರೆಡಿಟ್ ಲೈನ್ ಅನ್ನು ಒದಗಿಸಿದ್ದಕ್ಕಾಗಿ ಭಾರತಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.
ಈ ವರ್ಷ ಶ್ರೀಲಂಕಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವವನ್ನು ಗುರುತಿಸಲು ನಾಣ್ಯಗಳು ಮತ್ತು ಅಂಚೆಚೀಟಿ ಬಿಡುಗಡೆ ಸೇರಿದಂತೆ ಹಲವಾರು ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಜೈಶಂಕರ್, ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಲು ಸಂತೋಷವಾಗಿದೆ. ನಮ್ಮ ನೆರೆಹೊರೆಯ ಸಂಬಂಧದ ವಿವಿಧ ಆಯಾಮಗಳನ್ನು ಪರಿಶೀಲಿಸಲಾಗಿದೆ. ಭಾರತದ ನಿರಂತರವಾಗಿ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು.
ಮೂರು ದಿನಗಳ ಕಾಲ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಶ್ರೀಲಂಕಾ ಪ್ರವಾಸದಲ್ಲಿದ್ದು, ಇಂದಿನಿಂದ ಕೊಲಂಬೊದಲ್ಲಿ ಪ್ರಾರಂಭವಾಗುವ 5ನೇ ಬಿಮ್‍ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
Comments
Post a Comment