ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

 

ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ ಗರಡಿ ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೂರ್ಯ ನಾಯಕನಾಗಿ ನಟಿಸುತ್ತಿರುವ, ಸೋನಾಲ್ ಮಾಂಟೆರೊ ನಾಯಕಿಯಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಈ ಸುಂದರ ತಾಣದಲ್ಲಿ “ಗರಡಿ” ಚಿತ್ರದ ಟೈಟಲ್ ಸಾಂಗ್ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಕರ್ನಾಟಕ ರಾಜ್ಯದ ಮಂತ್ರಿಗಳು, ನಟರು, ನಿರ್ಮಾಪಕರೂ ಆಗಿರುವ ಕೌರವ ಬಿ.ಸಿ.ಪಾಟೀಲ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಗರಡಿ ಮನೆಯಲ್ಲಿ ತರಭೇತಿ ಪಡೆದಿರುವ ಸಾಕಷ್ಟು ಕುಸ್ತಿಪಟುಗಳು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.  ಬರೀ ಹಾಡಿನ ಚಿತ್ರೀಕರಣವಷ್ಟೇ ಅಲ್ಲದೇ ನಾಯಕ ಸೂರ್ಯ, ನಾಯಕಿ ಸೋನಾಲ್ ಮಾಂಟೆರೊ, ಕೌರವ ಬಿ‌.ಸಿ.ಪಾಟೀಲ್ ಮುಂತಾದವರ ಅಭಿನಯದಲ್ಲಿ ಮಾತಿನ ಭಾಗದ ಚಿತ್ರೀಕರಣ ಸಹ ನಡೆದಿದೆ. 

ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಈ ಚಿತ್ರದ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಹಳ ದಿನಗಳ ನಂತರ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.

ವಿ.ಹರಿಕೃಷ್ಣ ಅವರ ಸುಮಧುರ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸೂರ್ಯ, ಸೋನಾಲ್ ಮಾಂಟೆರೊ, ಕೌರವ ಬಿ.ಸಿ.ಪಾಟೀಲ್, ರವಿಶಂಕರ್, ಎಸ್.ಟಿ.ಸೋಮಶೇಖರ್, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಸೂರಜ್ ಬೇಲೂರ್, ಕಾಮಿಡಿ ಕಿಲಾಡಿಗಳು ನಯನ, ತ್ರಿವೇಣಿ(ಟಗರು), ರವಿಚೇತನ್, ತೇಜಸ್ವಿನಿ ಪ್ರಕಾಶ್ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ.

Comments

Popular posts from this blog

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು