ಬಣ್ಣ ಎರಚಾಡುವಾಗ ಎರಡು ಗುಂಪುಗಳ ನಡುವೆ ಗಲಾಟೆ: ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣ


ಬಣ್ಣ ಎರಚಾಡುವಾಗ ಎರಡು ಗುಂಪುಗಳ ನಡುವೆ ಗಲಾಟೆ: ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣ

ಚಿಕ್ಕೋಡಿ: ರಂಗ ಪಂಚಮಿ ಹಬ್ಬದ ಪ್ರಯುಕ್ತ ಬಣ್ಣ ಆಡುವ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ  ಬಣ್ಣ ಎರಚಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷನನ್ನು ತಳ್ಳಾಡುವುದರ ಜೊತೆಗೆ ಪೊಲೀಸರ ಮೇಲೆಯೇ ಯುವಕರ ಗುಂಪೊಂದು ಹಲ್ಲೆ ಮಾಡಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕೋಡಿ ಪಿಎಸ್‍ಐ ಹಾಗೂ ಸಿಬ್ಬಂದಿ ದೌಡಾಯಿಸಿದ್ದಾರೆ. ಹೆಚ್ಚಿನ ಪೊಲೀಸ್ ನಿಯೋಜನೆ ಬಳಿಕ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಇದರಿಂದಾಗಿ ಕರೋಶಿ ಗ್ರಾಮ ಸಂಪೂರ್ಣ ಬಂದ್ ಆಗಿದೆ.

ಸದ್ಯ ಕರೋಶಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜನರು ಆತಂಕದಲ್ಲಿದ್ದಾರೆ. ಸ್ಥಳದಲ್ಲೆ ಪೊಲೀಸ್ ಹಿರಿಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.  ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments

Popular posts from this blog

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು