ಪ್ರಾದೇಶಿಕ ಅರಣ್ಯಾಧಿಕಾರಿಗಳ ಎರಡು ಮನೆಗಳ ಮೇಲೆ ಎಸಿಬಿ ದಾಳಿ
ಪ್ರಾದೇಶಿಕ ಅರಣ್ಯಾಧಿಕಾರಿಗಳ ಎರಡು ಮನೆಗಳ ಮೇಲೆ ಎಸಿಬಿ ದಾಳಿ

ಬೀದರ್: ನಗರದಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಎಸಿಬಿ ದಾಳಿ ಮಾಡಿದ್ದು, ಪ್ರಾದೇಶಿಕ ಅರಣ್ಯಾಧಿಕಾರಿಯೊಬ್ಬರ ಎರಡು ನಿವಾಸಗಳ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.
ಸದ್ಯ ಯಾದಗಿರಿಯಲ್ಲಿ ಅರಣ್ಯ ಇಲಾಖೆಯ ಪ್ರಾದೇಶಿಕ ಅರಣ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ರಮೇಶ್ ಕನಕಟ್ಟಿ ನಿವಾಸಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಓಲ್ಡ್ ಆದರ್ಶ ಕಾಲೋನಿ ಹಾಗೂ ಚಿಟಗುಪ್ಪಾ ತಾಲೂಕಿನಲ್ಲಿರುವ ಉಡಬಾಳ ಗ್ರಾಮದಲ್ಲಿರುವ ನಿವಾಸದ ಮೇಲೆಯೂ ದಾಳಿ ಮಾಡಲಾಗಿದೆ.
ಅಕ್ರಮ ಆಸ್ತಿಯನ್ನು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿಯ ಕಚೇರಿ ಸೇರಿದಂತೆ ಏಕಕಾಲಕ್ಕೆ ಮೂರು ಕಡೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸಿಬಿ ಎಸ್‍ಪಿ ಅಮರನಾಥ ರೆಡ್ಡಿ ಮಾರ್ಗದರ್ಶನದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದು, ಅಕ್ರಮ ಆಸ್ತಿಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.
Comments
Post a Comment