ನಮ್ಮ ದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದರೆ ಮಾತ್ರವೇ ಪರಮಾಣು ಶಸ್ತ್ರಾಸ್ತ್ರ ಬಳಕೆ: ರಷ್ಯಾ

 

ನಮ್ಮ ದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದರೆ ಮಾತ್ರವೇ ಪರಮಾಣು ಶಸ್ತ್ರಾಸ್ತ್ರ ಬಳಕೆ: ರಷ್ಯಾ

ಮಾಸ್ಕೋ: ರಷ್ಯಾದ ಅಸ್ತಿತ್ವಕ್ಕೆ ಬೆದರಿಕೆಯಿದ್ದರೆ ಮಾತ್ರ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುತ್ತದೆ ಎಂದು ರಷ್ಯಾದ ವಕ್ತಾರ ಡಿಮಿಟ್ರಿ ಪೆಸ್ಕೋವ್ ಸೋಮವಾರ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನಾವು ಭದ್ರತಾ ಪರಿಕಲ್ಪನೆಯನ್ನು ಹೊಂದಿದ್ದೇವೆ. ರಾಜ್ಯದ ಅಸ್ತಿತ್ವಕ್ಕೆ ಬೆದರಿಕೆ ಉಂಟಾದಾಗ ಮಾತ್ರ ಅದನ್ನು ತೊಡೆದುಹಾಕಲು ನಾವು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಸಾಧ್ಯತೆ ಇದೆ ಹಾಗೂ ಖಂಡಿತವಾಗಿಯೂ ಬಳಸುತ್ತೇವೆ ಎಂದು ಹೇಳಿದ್ದಾರೆ.

ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೇಶದ ಕಾರ್ಯತಂತ್ರದ ಪರಮಾಣು ಪಡೆಗೆ ಆಕ್ರಮಣಕ್ಕೆ ತಯಾರಾಗಿರಲು ತಿಳಿಸಿದ್ದರು. ಈ ಆದೇಶ ಜಾಗತಿಕವಾಗಿಯೇ ಎಚ್ಚರಿಕೆಯ ಕರೆಗಂಟೆಯಾಗಿದೆ. 

ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಗಾಗಿ ಪರಮಾಣು ಶಸ್ತ್ರಾಸ್ತ್ರ ಬಳಕೆ ಕಾರಣವಾಗುವುದಿಲ್ಲ. ಬದಲಾಗಿ ರಷ್ಯಾಗೆ ಬೆದರಿಕೆಯಿದ್ದಲ್ಲಿ ಮಾತ್ರವೇ ಪರಮಾಣು ಶಸ್ತ್ರಾಸ್ತ್ರ ಬಳಸುವುಗಿ ಡಿಮಿಟ್ರಿ ಪೆಸ್ಕೋವ್ ಸ್ಪಷ್ಟಪಡಿಸಿದ್ದಾರೆ.

Comments

Popular posts from this blog

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು