ಕಂಗನಾ ಸೆಲೆಬ್ರಿಟಿಯಾಗಿರಬಹುದು, ಆದರೆ ಆಕೆಯೂ ಆರೋಪಿ: ಮುಂಬೈ ಕೋರ್ಟ್

 

ಕಂಗನಾ ಸೆಲೆಬ್ರಿಟಿಯಾಗಿರಬಹುದು, ಆದರೆ ಆಕೆಯೂ ಆರೋಪಿ: ಮುಂಬೈ ಕೋರ್ಟ್

ಬಾಲಿವುಡ್ ನಟಿ ಕಂಗನಾ ರಣಾವತ್ ಸೆಲೆಬ್ರೆಟಿ ಆಗಿರಬಹುದು. ಆದರೆ ಈಕೆ ಒಂದು ಪ್ರಕರಣದಲ್ಲಿ ಆರೋಪಿಯಾಗಿದ್ದಾಳೆ ಎಂದು ಮುಂಬೈ ಕೋರ್ಟ್ ಹೇಳಿದೆ.

ಪ್ರಕರಣವೇನು?: ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಕಂಗನಾ ರಣಾವತ್, ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ ಅವರ ಖ್ಯಾತಿಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ್ದರು. ಈ ಸಂದರ್ಶನ ವೀಡಿಯೋ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಲಕ್ಷಗಟ್ಟಲೆ ವೀಕ್ಷಣೆಗಳನ್ನು ಗಳಿಸಿತ್ತು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಕಂಗನಾ ರಣಾವತ್ ತಮ್ಮ ಹೆಸರನ್ನು ಅನಗತ್ಯವಾಗಿ ಎಳೆದಿದ್ದಾರೆ. ಇದರಿಂದ ತಮ್ಮ ಘನತೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಜಾವೇದ್ ಅಖ್ತರ್ ಅವರು 2020ರಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Comments

Popular posts from this blog

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು