Budget 2022: ಕಾಶಿಯಾತ್ರೆ ಕೈಗೊಳ್ಳುವವರಿಗೆ ಸಹಾಯಧನ; ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯಕ್ಕೆ ಪ್ಯಾಕೇಜ್ ಟ್ರಿಪ್

ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗುಲಗಳ ಸ್ವಾಯತ್ತತೆ, ದೇಗುಲಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂಪಾಯಿ ವೆಚ್ಚ ನೀಡಲಾಗಿದೆ. ತಸ್ತೀಕ್ ಮೊತ್ತ 60 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.



ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲನೇ ಬಾರಿಗೆ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಅದರಂತೆ ಬೀದರ್, ಕಲಬುರಗಿ ಕೋಟೆಗಳ ಪುನರುಜ್ಜೀವನ ಮಾಡುವ ಬಗ್ಗೆ ತಿಳಿಸಲಾಗಿದೆ. ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಶ್ರೀಶೈಲದಲ್ಲಿ ₹85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದೆ. ಮೊದಲ ಹಂತದಲ್ಲಿ 45 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಕಾಶಿಯಾತ್ರೆ ಕೈಗೊಳ್ಳುವವರಿಗೆ ₹5 ಸಾವಿರ ಸಹಾಯಧನ ನೀಡಲಾಗುವುದು. ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸಹಾಯಧನ ನೀಡುವುದಾಗಿ ಘೋಷಿಸಲಾಗಿದೆ. ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರುಗೆ ಪ್ಯಾಕೇಜ್ ಟ್ರಿಪ್ ಸೇವೆ ಆರಂಭ ಮಾಡಲಾಗುವುದು ಎಂದು ತಿಳಿಸಲಾಗಿದ

ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗುಲಗಳ ಸ್ವಾಯತ್ತತೆ, ದೇಗುಲಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂಪಾಯಿ ವೆಚ್ಚ ನೀಡಲಾಗಿದೆ. ತಸ್ತೀಕ್ ಮೊತ್ತ 60 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ

ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡಲಾಗಿದೆ. 20 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆಯಲ್ಲಿ ಕನ್ನಡ ಭವನ, ವಿಶಿಷ್ಟ ಕಲೆಗಳ ಉತ್ತೇಜನಕ್ಕೆ 4 ಸಾಂಸ್ಕೃತಿಕ ಶಿಬಿರ ಘೋಷಿಸಲಾಗಿದೆ.

Comments

Popular posts from this blog

ಆಸ್ತಿ ವಿಚಾರಕ್ಕೆ ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಪಾಪಿ ಮಗ