RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು
RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

ರಾಯಚೂರು: ಜ್ಯೂ.ಎನ್‌ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಸಿನೆಮಾವನ್ನ ನೋಡಲು ಅಭಿಮಾನಿಗಳು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಬೆಳಿಗ್ಗೆ 5:30 ಕ್ಕೆ ಮೊದಲ ಶೋ ಆರಂಭವಾಗಿದೆ. ಚಿತ್ರಮಂದಿರದ ಬಾಗಿಲು ,ಕಿಟಕಿ ,ಪೈಪ್‌ಗಳನ್ನು ಮುರಿದು ಅಭಿಮಾನಿಗಳು ಒಳನುಗ್ಗಿ ಸಿನೆಮಾ ವೀಕ್ಷಣೆ ಮಾಡಿದ್ದಾರೆ. ನಗರದ ಪೂರ್ಣಿಮಾ ಚಿತ್ರಮಂದಿರದಲ್ಲಿ ನೂಕುನುಗ್ಗಲು ಉಂಟಾಗಿದೆ. ಟಿಕೆಟ್ ಪಡೆಯದೆ ಚಿತ್ರಮಂದಿರಕ್ಕೆ ಪ್ರೇಕ್ಷಕರು ನುಗ್ಗಿದ್ದಾರೆ. ಗೇಟ್ ಏರಿ ಚಿತ್ರಮಂದಿರದೊಳಗೆ ನುಗ್ಗಿ ಚಿತ್ರ ವೀಕ್ಷಣೆ ಮಾಡಿದ್ದಾರೆ. ನಿಗದಿತ ಸೀಟ್ ಗಿಂತ 250 ಕ್ಕೂ ಹೆಚ್ಚು ಜನ ಒಳನುಗ್ಗಿ ಸಿನೆಮಾ ವೀಕ್ಷಣೆ ಮಾಡಿದ್ದಾರೆ.
ಆಂಧ್ರಪ್ರದೇಶ, ತೆಲಂಗಾಣ ಗಡಿ ಹಿನ್ನೆಲೆ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲಿ ಮೂರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. ಜನರನ್ನ ನಿಯಂತ್ರಿಸಲು ಚಿತ್ರಮಂದಿರ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಚಿತ್ರಮಂದಿರಗಳ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆಲವರು ನಕಲಿ ಟಿಕೆಟ್‌ಗಳನ್ನ ಹಿಡಿದು ಒಳನುಗ್ಗಲು ಪ್ರಯತ್ನಿಸಿದ್ದಾರೆ.
Comments
Post a Comment