Ukraine Crisis: ಉಕ್ರೇನ್​​ನಲ್ಲಿದ್ದ 20,000 ಭಾರತೀಯರಲ್ಲಿ 17,000 ಜನ ಸುರಕ್ಷಿತ ಸ್ಥಳಕ್ಕೆ ಶಿಫ್ಟ್; ರಾಜ್ಯದ 149 ವಿದ್ಯಾರ್ಥಿಗಳು ವಾಪಸ್

Operation Ganga | Russia Ukraine War: ‘ಆಪರೇಷನ್ ಗಂಗಾ’ ಮೂಲಕ ಉಕ್ರೇನ್​ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳ ರಕ್ಷಣೆ ನಡೆಯುತ್ತಿದೆ. ಇದುವರೆಗೆ ಎಷ್ಟು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ? ಭಾರತದ ಎಷ್ಟು ವಿದ್ಯಾರ್ಥಿಗಳು ಇನ್ನೂ ಅಲ್ಲಿ ಸಿಲುಕಿಕೊಂಡಿದ್ದಾರೆ? ಈ ಎಲ್ಲಾ ಮಾಹಿತಿ ಇಲ್ಲಿದೆ.


  • Edited By: sandeep s
Ukraine Crisis: ಉಕ್ರೇನ್​​ನಲ್ಲಿದ್ದ 20,000 ಭಾರತೀಯರಲ್ಲಿ 17,000 ಜನ ಸುರಕ್ಷಿತ ಸ್ಥಳಕ್ಕೆ ಶಿಫ್ಟ್; ರಾಜ್ಯದ 149 ವಿದ್ಯಾರ್ಥಿಗಳು ವಾಪಸ್
ಉಕ್ರೇನ್​ನಲ್ಲಿ  ಸಿಲುಕಿರುವ ವಿದ್ಯಾರ್ಥಿಗಳ ಕುಟುಂಬಸ್ಥರ ಭೇಟಿ ಮಾಡಿ ಮಾಹಿತಿ ಪಡೆದು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ರಾಜ್ಯದ ನೋಡಲ್ ಅಧಿಕಾರಿ ಮನೋಜ್ ರಾಜನ್​ ಹೇಳಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರೂ ಆಗಿರುವ ಅವರು, ‘‘ಖಾರ್ಕಿವ್​ನಿಂದ ವಿದ್ಯಾರ್ಥಿಗಳು ನಡೆದುಕೊಂಡು ಬರುತ್ತಿದ್ದಾರೆ. ಕೇಂದ್ರ ಸರ್ಕಾರ ಸೂಚಿಸಿರುವ ಸ್ಥಳಕ್ಕೆ ವಿದ್ಯಾರ್ಥಿಗಳು ಬಂದಿದ್ದಾರೆ. ಭಾರತದ ವಿದ್ಯಾರ್ಥಿಗಳು ಖಾರ್ಕಿವ್​​​ನಿಂದ ಹೊರಬಂದಿದ್ದಾರೆ. ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳು ಕೂಡ ಖಾರ್ಕಿವ್​ನಿಂದ ಬಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಉಕ್ರೇನ್​ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ರಾಜ್ಯದ 693 ವಿದ್ಯಾರ್ಥಿಗಳ ಪೈಕಿ 149 ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ. ಉಳಿದ 544 ವಿದ್ಯಾರ್ಥಿಗಳ ರಕ್ಷಣೆಗಾಗಿ ಪ್ರಯತ್ನ ನಡೆಯುತ್ತಿದೆ ಎಂದು ಮನೋಜ್ ರಾಜನ್​ ಹೇಳಿಕೆ ನೀಡಿದ್ದಾರೆ. ಉಕ್ರೇನ್​ನಿಂದ ನಾಳೆ 16 ವಿಮಾನಗಳು ಭಾರತಕ್ಕೆ ಬರಲಿವೆ. ನಾಳೆ ಬರುವ ವಿಮಾನಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಬರುತ್ತಾರೆ ಎಂದು ಅವರು ಹೇಳಿದ್ದಾರೆ.
  1. ಖಾರ್ಕಿವ್​ನಿಂದ ಹೊರ ಬಂದ ಭಾರತದ ವಿದ್ಯಾರ್ಥಿಗಳು: ಉಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಕುಟುಂಬಸ್ಥರ ಭೇಟಿ ಮಾಡಿ ಮಾಹಿತಿ ಪಡೆದು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಖಾರ್ಕಿವ್​ನಿಂದ ವಿದ್ಯಾರ್ಥಿಗಳು ನಡೆದುಕೊಂಡು ಬರ್ತಿದ್ದಾರೆ. ಕೇಂದ್ರ ಸರ್ಕಾರ ಸೂಚಿಸಿರುವ ಸ್ಥಳಕ್ಕೆ ವಿದ್ಯಾರ್ಥಿಗಳು ಬಂದಿದ್ದಾರೆ. ಭಾರತದ ಎಲ್ಲ ವಿದ್ಯಾರ್ಥಿಗಳು ಖಾರ್ಕಿನ್​ನಿಂದ ಹೊರಬಂದಿದ್ದಾರೆ. ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳು ಖಾರ್ಕಿವ್​ನಿಂದ ಬಂದಿದ್ದಾರೆ ಎಂದು ಕರ್ನಾಟಕ ರಾಜ್ಯದ ನೋಡಲ್ ಅಧಿಕಾರಿ ಮನೋಜ್ ರಾಜನ್​ ಹೇಳಿದ್ದಾರೆ.
  2. ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಆದ 17,000 ಭಾರತೀಯರು: ಉಕ್ರೇನ್​​ನಲ್ಲಿದ್ದ 20 ಸಾವಿರ ಭಾರತೀಯ ವಿದ್ಯಾರ್ಥಿಗಳಲ್ಲಿ 17 ಸಾವಿರ ಜನ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಆಗಿದ್ದಾರೆ. 3,000 ಭಾರತದ ವಿದ್ಯಾರ್ಥಿಗಳು ಉಕ್ರೇನ್​​ನಲ್ಲಿದ್ದಾರೆ ಎಂದು ನವದೆಹಲಿಯಲ್ಲಿ ವಿದೇಶಾಂಗ ಇಲಾಖೆ ವಕ್ತಾರ ಅರೀಂದಮ್ ಬಗಚಿ ಹೇಳಿಕೆ ನೀಡಿದ್ದಾರೆ. IAFನ‌ C-17 ವಿಮಾನಗಳ‌ ಮೂಲಕ ವಿದ್ಯಾರ್ಥಿಗಳ ಶಿಫ್ಟ್ ಮಾಡಲಾಗುತ್ತಿದೆ. ಈವರೆಗೆ 798 ವಿದ್ಯಾರ್ಥಿಗಳು ಹಂಗೇರಿ, ಪೋಲೆಂಡ್, ರೊಮೇನಿಯಾ ಮೂಲಕ ಭಾರತಕ್ಕೆ ವಾಪಸಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

  3. ಉಕ್ರೇನ್​ನಲ್ಲಿದ್ದ ರಾಜ್ಯದ ವಿದ್ಯಾರ್ಥಿಗಳಿಗೆ ಆನ್​ಲೈನ್ ಕ್ಲಾಸ್?: ಉಕ್ರೇನ್​ನಲ್ಲಿದ್ದ ರಾಜ್ಯದ ವಿದ್ಯಾರ್ಥಿಗಳಿಗೆ ಆನ್​ಲೈನ್ ಕ್ಲಾಸ್ ನಡೆಸಲಾಗುತ್ತಾ ಎಂಬ ಬಗ್ಗೆ ಪ್ರಶ್ನೆಗಳು ಮೂಡಿವೆ. 600ಕ್ಕೂ ಹೆಚ್ಚು ಮೆಡಿಕಲ್ ವಿದ್ಯಾರ್ಥಿಗಳಿಗೆ ಆನ್​ಲೈನ್ ಕ್ಲಾಸ್ ನಡೆಸುವ ಯೋಜನೆ ಇದೆಯಾ ಎಂಬ ಬಗ್ಗೆ ಹೇಳಲಾಗುತ್ತಿದೆ. ಉಕ್ರೇನ್​ನಲ್ಲಿ ಪರಿಸ್ಥಿತಿ ಸರಿಹೋಗುವವರೆಗೂ ಆನ್​ಲೈನ್ ಕ್ಲಾಸ್ ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಗಿರೀಶ್ ಹೇಳಿಕೆ ನೀಡಿದ್ದಾರೆ.
  4. ಆನ್​ಲೈನ್ ಕ್ಲಾಸ್ ಬಗ್ಗೆ ಸಭೆ: ಆನ್​ಲೈನ್ ಕ್ಲಾಸ್ ಬಗ್ಗೆ ಇಂದು ಸಿಎಂ ಬೊಮ್ಮಾಯಿ ಜತೆ ಸಭೆ ನಡೆಸಲಾಗುತ್ತದೆ. ಉಕ್ರೇನ್​ನಿಂದ ಬಂದವರಿಗೆ ಇಲ್ಲಿ ಶಿಕ್ಷಣ ನೀಡೋದು ಕಷ್ಟ. ಇಲ್ಲಿ ನೀಟ್ ಪರೀಕ್ಷೆ ಬರೆದ ಮಕ್ಕಳಿಗೆ ಸೀಟ್ ನೀಡಲಾಗಿದೆ. ಉಕ್ರೇನ್ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ತರಗತಿಗೆ ಅವಕಾಶವಿದೆ. ಪಠ್ಯ ಕ್ರಮ ಸ್ವಲ್ಪ ಬದಲಾಗಿದ್ರೂ ಆನ್​ಲೈನ್​ ತರಗತಿ ಸಾಧ್ಯ. ಉಕ್ರೇನ್ ವಿದ್ಯಾರ್ಥಿಗಳಿಗೆ ಇಲ್ಲಿಯೇ ಸೀಟ್ ನೀಡೋದು ಕಷ್ಟ. ಇಂದು ಸಿಎಂ ಜೊತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಚರ್ಚೆ ನಡೆಸುತ್ತೇವೆ. ಆನ್​ಲೈನ್​ ತರಗತಿ ಸೇರಿ ಇತರೆ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಗಿರೀಶ್ ಹೇಳಿದ್ದಾರೆ.

Comments

Popular posts from this blog

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ