ಪ್ರವೀಣ್ ಹತ್ಯೆ: ಬೆಳ್ಳಾರೆ ಉದ್ವಿಗ್ನ, ಸೆಕ್ಷನ್ 144 ಜಾರಿ; ನಳಿನ್ ಕಾರಿಗೆ ಮುತ್ತಿಗೆ, ಪೊಲೀಸರಿಂದ ಲಾಠಿ ಚಾರ್ಚ್!
ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ಹಿಂದೂ ಪರ ಕಾರ್ಯಕರ್ತರು ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಂಗಳೂರು: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ಹಿಂದೂ ಪರ ಕಾರ್ಯಕರ್ತರು ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಳ್ಳಾರೆಯಲ್ಲಿ ಪ್ರತಿಭಟನೆ ವೇಳೆ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಇನ್ನು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಲಾಠಿ ಚಾರ್ಚ್ ನಿಂದಾಗಿ ಹಲವು ಕಾರ್ಯಕರ್ತರಿಗೆ ಗಾಯಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂ ಘೋಷಿತ ಬಂದ್ ಗೆ ಹಿಂದು ಪರ ಸಂಘಟನೆಗಳು ಕರೆ ನೀಡಿವೆ. ಮರಣೋತ್ತರ ಪರೀಕ್ಷೆ ಕೈಗೊಂಡಿದ್ದು, ಕುಟುಂಬಸ್ಥರು ನೆಟ್ಟಾರುವಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ.
ಹಂತಕರು ಕೇರಳ ನೋಂದಣಿ ಇರುವ ವಾಹನದಲ್ಲಿ ಬಂದು ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಂತರ ಪತ್ತೆಗೆ 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಐದು ತಂಡಗಳ ಪೈಕಿ ಮೂರು ತಂಡಗಳನ್ನು ಕ್ರಮವಾಗಿ ಕೇರಳ ಮತ್ತು ಮಡಿಕೇರಿ ಮತ್ತು ಕರ್ನಾಟಕದ ಹಾಸನಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾಯ್ ಮಾಹಿತಿ ನೀಡಿದ್ದಾರೆಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿ ಮೃತ ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ಯತ್ನಿಸಿದ್ದರು. ಈ ವೇಳೆ ಹಿಂದೂ ಕಾರ್ಯಕರ್ತರು ನಳಿನ್ ಕಾರಿಗೆ ಮುತ್ತಿಗೆ ಹಾಕಿದರು. ಆಕ್ರೋಶಗೊಂಡ ಕಾರ್ಯಕರ್ತರು ಕಟೀಲ್ ರ ಕಾರನ್ನು ಪಲ್ಟಿ ಮಾಡಲು ಯತ್ನಿಸಿದ್ದು ಸಾಧ್ಯವಾಗದೆ ಟೈರ್ ಗಳಿಂದ ಗಾಳಿ ಹೊರಬಿಟ್ಟರು.
ಪರಿಸ್ಥಿತಿ ಕೈಮೀರುತ್ತಿದೆ ಎಂದು ತಿಳಿದ ಪೊಲೀಸರು ಲಾಠಿ ಚಾರ್ಚ್ ಮಾಡಿ ಗುಂಪು ಚದುರಿಸಿದರು. ಪೊಲೀಸ್ ಭದ್ರತೆಯಲ್ಲಿ ನಳಿನ್ ಅಲ್ಲಿಂದ ತೆರಳಿದರು.
Comments
Post a Comment