Posts

Showing posts from March 20, 2022

ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

Image
  ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ ರಾಯಪುರ:  ತಂದೆಯೊಬ್ಬ 7 ವರ್ಷದ ತನ್ನ ಮೃತ ಮಗಳ ದೇಹವನ್ನು ಭುಜದ ಮೇಲೆ ಹೊತ್ತು 10 ಕಿ.ಮೀ ಸಾಗಿದ ಘಟನೆ ಶುಕ್ರವಾರ ಬೆಳಗ್ಗೆ ಸರ್ಗುಜಾ ಜಿಲ್ಲೆಯ ಲಖನ್‍ಪುರ್ ಗ್ರಾಮದಲ್ಲಿ ನಡೆದಿದೆ. ಘಟನೆ ವೀಡೀಯೋವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ದೃಶ್ಯವನ್ನು ಕಂಡ ಆರೋಗ್ಯ ಮಂತ್ರಿ ಟಿ.ಎಸ್ ಸಿಂಗ್ ದೇವ್ ತನಿಖೆಗೆ ಆದೇಶಿಸಿದ್ದಾರೆ. ವೀಡಿಯೋದಲ್ಲಿ ವ್ಯಕ್ತಿ ತನ್ನ ಹೆಗಲ ಮೇಲೆ ಶವವನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಅಮದಲದಲ್ಲಿರುವ ಮನೆ ತಲುಪಲು ಕಾಲ್ನಡಿಗೆಯಲ್ಲಿ ಸುಮಾರು 10 ಕಿ.ಮೀ ದೂರ ಕ್ರಮಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶುಕ್ರವಾರ ಜಿಲ್ಲಾ ಕೇಂದ್ರವಾದ ಅಂಬಿಕಾಪುರದಲ್ಲಿದ್ದ ಆರೋಗ್ಯ ಸಚಿವ ಸಿಂಗ್ ದೇವ್ ಅವರು ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿಗೆ ಸೂಚಿಸಿದ್ದಾರೆ. ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ವಿಡಿಯೋ ನೋಡಿದೆ. ಇದು ಗೊಂದಲದ ಸಂಗತಿಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂಎಚ್‍ಒಗೆ ಹೇಳಿದ್ದೇನೆ. ಅಲ್ಲಿ ನೇಮಕಗೊಂಡು ಕರ್ತವ್ಯ ನಿರ್ವಹಿಸಲು ಸಾಧ್ಯವಾಗದವರನ್ನು ವಜಾಗೊಳಿಸಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದರು. ಕರ್ತವ್ಯ ನಿರತ ಆರೋಗ್ಯ ಸಿಬ್ಬಂದಿ ಮನೆಯವರ ಮನವೊಲಿಸಿ ವಾಹನಕ್

ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ, ಸಿದ್ದರಾಮಯ್ಯ ಧೋರಣೆ- ಬಿಜೆಪಿ ತಿರುಗೇಟು

Image
  ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ, ಸಿದ್ದರಾಮಯ್ಯ ಧೋರಣೆ- ಬಿಜೆಪಿ ತಿರುಗೇಟು - ಹಿಜಬ್ ಧರಿಸಲು ಅವಕಾಶ ನೀಡುವಂತೆ ಸಿದ್ದರಾಮಯ್ಯ ಏಕಪಾತ್ರಾಭಿನಯ ಬೆಂಗಳೂರು:  ಹಿಜಬ್ ಕುರಿತಾಗಿ ನಾನು ಹೇಳಿರುವುದನ್ನು ತಿರುಚಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಬಿಜೆಪಿ ಸಾಲು, ಸಾಲು ಟ್ವೀಟ್ ಮಾಡುವ ಮೂಲಕವಾಗಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದೆ. ಟ್ವೀಟ್‍ನಲ್ಲಿ ಏನಿದೆ?:  ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತಿದೆ ಸಿದ್ದರಾಮಯ್ಯ ಅವರ ಧೋರಣೆ. ಈ ಹಿಂದೆ ಹಲವು ಮಠಾಧೀಶರ ವಿರುದ್ಧ ಅಗೌರವಯುತವಾಗಿ ನಡೆದುಕೊಂಡಿದ್ದರು. ಸಿದ್ದರಾಮಯ್ಯ ಅವರು ಈಗ ಸ್ವಾಮೀಜಿಗಳ ಮೌನವನ್ನೂ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಸ್ವಾಮೀಜಿಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಈ ಹಿಂದೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲ ಯತ್ನ ನಡೆಸಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಸ್ವಾಮೀಜಿಗಳೇ ಮನವಿ ನೀಡಿದ್ದರು ಎಂಬ ಸುಳ್ಳು ಹೇಳಿಕೆಯನ್ನು ರಾಜ್ಯದ ಜನ ಮರೆತಿಲ್ಲ ಎಂದು ಕಿಡಿಕಾರಿದ್ದಾರೆ.  ಬಿಎಸ್‍ವೈ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಮಠಮಂದಿರಗಳಿಗೆ ಉದಾರ ನೆರವು ನೀಡಿದ್ದರು. ಅಂದು ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಇದಕ್ಕೆ ವಿರ

ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ

Image
  ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ ಉಡುಪಿ:  ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಮನವಿ ಸಲ್ಲಿಸಿದೆ. ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಸದಸ್ಯರು ಹೆಸರು ಬದಲಾಯಿಸುವಂತೆ ದೇವಾಲಯದ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಮನವಿಯಲ್ಲಿ ಏನಿದೆ? ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ ಭಾರತದ 108 ಶಕ್ತಿ ಪೀಠಗಳಲ್ಲಿ ಒಂದು. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ ಆದಿ ಶಂಕರಾಚಾರ್ಯರು ಮೂಕಾಂಬಿಕಾ ತಾಯಿಯನ್ನು ಇಲ್ಲಿ ನೆಲೆಗೊಳಿಸಿದ್ದಾರೆ. ಮೂಕಾಂಬಿಕಾ ತಾಯಿಯು ದುರ್ಗ, ಸರಸ್ವತಿ ಮತ್ತು ಮಹಾಲಕ್ಷ್ಮಿಯ ಒಂದು ಅವತಾರ, ಮೂಕಾಂಬಿಕಾ ದೇವಿಯ ದೇವಸ್ಥಾನದಲ್ಲಿ ಕೋಟ್ಯಂತರ ಭಕ್ತರು ಅತೀವ ನಂಬಿಕೆಯನ್ನು ಇರಿಸಿಕೊಂಡಿದ್ದಾರೆ. ಇಂತಹ ಪುಣ್ಯ ಕ್ಷೇತ್ರದಲ್ಲಿ ಒಬ್ಬ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ಕನ್ನಡ ವಿರೋಧಿ ಸಾವಿರಾರು ಹಿಂದುಗಳನ್ನು ನರಮೇಧ ಮಾಡಿ, ನೂರಾರು ದೇವಸ್ಥಾನಗಳನ್ನು ದ್ವಂಸಗೊಳಿಸಿದಂತಹ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ರಾತ್ರಿ 8 ಗಂಟೆಗೆ ದೇವಿ ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ

ನಿದ್ದೆ ನಿಮ್ಮ ಜೀವನದಲ್ಲಿ ಎಷ್ಟು ಮುಖ್ಯ? – ನಿದ್ದೆ ಕೆಟ್ಟರೆ ಆರೋಗ್ಯ ಕೆಡುತ್ತೆ

Image
  ನಿದ್ದೆ ನಿಮ್ಮ ಜೀವನದಲ್ಲಿ ಎಷ್ಟು ಮುಖ್ಯ? – ನಿದ್ದೆ ಕೆಟ್ಟರೆ ಆರೋಗ್ಯ ಕೆಡುತ್ತೆ ಮ ನುಷ್ಯನಿಗೆ ನಿದ್ರೆ ಬಹುಮುಖ್ಯವಾಗಿದ್ದು, ಪ್ರತಿನಿತ್ಯ 7 ರಿಂದ 9 ತಾಸು ಉತ್ತಮ ನಿದ್ದೆ ಬೇಕಾಗುತ್ತದೆ. ನಿದ್ರೆ ಸರಿಯಾಗಿ ಆದರೆ ಮಾತ್ರ ಕೆಲಸವನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಜೊತಗೆ ನಮ್ಮ ಭಾವನೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಮಾನಸಿಕವಾಗಿ ದಣಿಯುತ್ತೀರಿ ಜೊತೆಗೆ ಮುಂಗೋಪ, ಇಡೀ ದಿನ ಕಿರಿಕಿರಿಯಂತಹ ಸಮಸ್ಯೆಗಳು ಎದುರಾಗುತ್ತದೆ. ಜೊತೆಗೆ ಆಲಸ್ಯರಾಗುತ್ತೀರಿ. ಇದು ಮಾನಸಿಕ ತೊಂದರೆಯಾಗಿದ್ದರೆ, ದೈಹಿಕವಾಗಿ ಅನೇಕ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತೀರಿ. ಕೇಂದ್ರ ನರಮಂಡಲದ ಮೇಲೆ ಪರಿಣಾಮ:  ಕೇಂದ್ರ ನರಮಂಡಲವು ದೇಹದ ಪ್ರಾಥಮಿಕ ಮಾಹಿತಿಯ ಹೆದ್ದಾರಿಯಾಗಿದೆ. ಇದು ಸರಿಯಾಗಿ ಕೆಲಸ ಮಾಡಲು ನಿದ್ದೆ ಅವಶ್ಯವಿರುತ್ತದೆ. ಆದರೆ ತೀವ್ರವಾದ ನಿದ್ರಾಹೀನತೆಯಿಂದಾಗಿ ನರಮಂಡಲದಲ್ಲಿ ಪ್ರಮುಖ ತೊಂದರೆ ಆಗುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ:  ನಿದ್ರಾಹೀನತೆಯಿಂದ ನಿಮ್ಮ ದೇಹವು ರೋಗ ನಿರೋಧಕಶಕ್ತಿಯನ್ನು ಬಲಪಡಿಸುವುದನ್ನು ನಿಲ್ಲಿಸುತ್ತದೆ. ನೀವು ಪ್ರತಿನಿತ್ಯ ಸಾಕಷ್ಟು ನಿದ್ದೆಯನ್ನು ಪಡೆಯದಿದ್ದರೆ, ನಿಮ್ಮ ದೇಹವು ಸೋಂಕು ಹಾಗೂ ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಸಾಧ್ಯವಾಗುವುದಿಲ್ಲ. ಜೊತೆಗೆ ರೋಗದಿಂದ ಚೇತರಿಸಿಕೊಳ್ಳಲು ಅಧಿಕ ಸಮಯ ಬೇಕಾಗುತ್ತದೆ. ಇಷ್ಟೇ ಅಲ್ಲದೇ ದೀರ್ಘಾವಧಿ ನಿದ್ರಾಹೀನತೆಯಿಂದಾಗಿ ಮಧುಮೇಹ ಹಾಗೂ ಹೃದ್ರೋಗದಂತಹ ಕ

ಕರಾವಳಿಯಿಂದ ಮೈಸೂರಿಗೆ ಎಂಟ್ರಿ – ಚಾಮುಂಡಿಬೆಟ್ಟದಲ್ಲಿ ಬಹಿಷ್ಕಾರದ ಕಿಚ್ಚು

Image
  ಕರಾವಳಿಯಿಂದ ಮೈಸೂರಿಗೆ ಎಂಟ್ರಿ – ಚಾಮುಂಡಿಬೆಟ್ಟದಲ್ಲಿ ಬಹಿಷ್ಕಾರದ ಕಿಚ್ಚು ಮೈಸೂರು:  ಮಂಗಳೂರು, ಉಡುಪಿ, ಬೆಂಗಳೂರಿಗೆ ವ್ಯಾಪಿಸಿದ್ದ ಧರ್ಮ ಸಂಘರ್ಷ ಇದೀಗ ಸಾಂಸ್ಕøತಿಕ ನಗರಿ ಮೈಸೂರಿಗೂ ವ್ಯಾಪಿಸುತ್ತಿದೆ. ಮೈಸೂರಿನ ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಾಲಯಗಳ ಆವರಣದಲ್ಲಿ ಹಾಗೂ ಜಾತ್ರಾಮಹೋತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಬರ್ಂಧ ವಿಧಿಸುವಂತೆ ಸಂಘಟನೆಗಳು ಆಗ್ರಹಿಸಿವೆ. ಈ ಸಂಬಂಧ ಮೈಸೂರಿನ ವಿಶ್ವಹಿಂದೂ ಪರಿಷದ್ ಸಂಘಟನೆಯು ಜಿಲ್ಲಾಧಿಕಾರಿಗಳ ಮೂಲಕ ಧಾರ್ಮಿಕ ದತ್ತಿ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಿದೆ.  ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲ ದೇವಸ್ಥಾನದ ಆವರಣದಲ್ಲಿ ಹಾಗೂ ಜಾತ್ರಾ ಮಹೋತ್ಸವಗಳಲ್ಲಿ ಅಂಗಡಿ ಮುಂಗಟ್ಟು, ಟೆಂಡರ್ ಪ್ರಕ್ರಿಯೆಯಲ್ಲಿ ಹಿಂದುಯೇತರರಿಗೆ ಅವಕಾಶ ನೀಡಬಾರದು ಹಾಗೂ ಮೈಸೂರಿನ ಚಾಮುಂಡಿಬೆಟ್ಟ ದೇವಸ್ಥಾನ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿದೆ. ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಅಧಿನಿಯಮ 1997, 2002ರ 31(12) ನಿಯಮದ ಪ್ರಕಾರ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಾಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂದೂ ಅಲ್ಲದವರಿಗೆ ಗುತ್ತಿಗೆ ನೀಡುವಂತಿಲ್ಲ. ಹೀಗಾಗಿ ಧಾರ್ಮಿಕ ದತ್ತಿ ಇಲಾಖೆಯು ಕೂಡಲೇ ರಾಜ್ಯದ ಎಲ್ಲ ದೇವಸ್ಥಾನ ಆಡಳಿತ ಮಂಡಳಿಯ ಇಲಾಖೆಗೆ ಒಳಪಟ್ಟ ಹಿಂದೂ ದೇವಸ್ಥಾನ, ಜಾತ್ರಾ ಮಹೋತ್ಸವ, ರಥೋತ್ಸವ ಹಾಗೂ ಇತರ ಧಾರ್ಮ

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಸಮಿತಿ ರಚನೆ: ಬೊಮ್ಮಾಯಿ

Image
  ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಸಮಿತಿ ರಚನೆ: ಬೊಮ್ಮಾಯಿ ಬೆಂಗಳೂರು:  ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್‍ನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರಕಿಸುವುದು ಹಾಗೂ ಒಂದೇ ಬಾರಿಗೆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಮಿತಿ ರಚಿಸಲಾಗಿದೆ ಎಂದರು. ಬಜೆಟ್‍ನಲ್ಲಿ ಘೋಷಿಸಿರುವ ಹೊಸ ಯೋಜನೆಗಳನ್ನು ತೀವ್ರಗತಿಯಲ್ಲಿ ಅನುಷ್ಠಾನಗೊಳಿಸಲು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ಹೇಳಿದರು. ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿ ಸಿದ್ಧತೆ:  ಸರ್ಕಾರ ಕೈಗಾರಿಕೋದ್ಯಮಕ್ಕೆ ಮಹತ್ವ ನೀಡಿದೆ. ನವೆಂಬರ್‍ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಕೈಗಾರಿ

ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಕೈದಿ

Image
  ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಕೈದಿ ಮುಂಬೈ:  ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಯರವಾಡ ತೆರೆದ ಜೈಲಿನಲ್ಲಿರುವ ಬ್ಯಾರಕ್‍ನಲ್ಲಿ ನಡೆದಿದೆ. ಗಣೇಶ್ ತಾಂಬೆ (53) ಆತ್ಮಹತ್ಯೆಗೆ ಶರಣಾದ ಕೈದಿ. 2010ರಲ್ಲಿ ವಿರಾರ್‌ನಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರಲ್ಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.  ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಡುಗೆ ಮನೆಯಲ್ಲಿ ಕೆಲಸ ಮುಗಿಸಿದ್ದ ತಾಂಬೆ ಬ್ಯಾರಕ್‍ನೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇತರೆ ಜೈಲು ಕೈದಿಗಳು ಆತನ ಶವವನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.  ಉಪ ಪೊಲೀಸ್ ಆಯುಕ್ತ ರೋಹಿದಾಸ್ ಪವಾರ್ ಮಾತನಾಡಿ, ಕೈದಿ ಗುರುವಾರ ಮಧ್ಯಾಹ್ನ ಯರವಾಡ ಜೈಲಿನ ಬ್ಯಾರಕ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪ್ರಾಥಮಿಕ ತನಿಖೆಯು ಆತ್ಮಹತ್ಯೆಯನ್ನು ಸೂಚಿಸುತ್ತದೆ. ಆತ್ಮಹತ್ಯೆಗೆ ಕಾರಣ ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ಉಳಿಯಬೇಕಾದ್ರೆ ಮೊದಲು ಸಿದ್ದರಾಮಯ್ಯರನ್ನು ವಜಾ ಮಾಡಿ: ಈಶ್ವರಪ್ಪ

Image
  ಕಾಂಗ್ರೆಸ್ ಉಳಿಯಬೇಕಾದ್ರೆ ಮೊದಲು ಸಿದ್ದರಾಮಯ್ಯರನ್ನು ವಜಾ ಮಾಡಿ: ಈಶ್ವರಪ್ಪ ಶಿವಮೊಗ್ಗ:  ಹಿಜಬ್ ವಿಚಾರದಲ್ಲಿ ರಾಜ್ಯ ರಾಜಕಾರಣಕ್ಕೆ ಒಂದು ಕಪ್ಪು ಚುಕ್ಕೆ ರೂಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಹಿಜಬ್ ವಿಷಯದಲ್ಲಿ ಅಕ್ಷಮ್ಯ ಅಪರಾಧದ ಹೇಳಿಕೆ ನೀಡಿದ್ದಾರೆ. ನಾನು ಸಿದ್ದರಾಮಯ್ಯ ಅವರನ್ನು ರಾಜ್ಯದ ಜನತೆ ಕ್ಷಮೆ ಕೇಳಿ ಎನ್ನುವುದಿಲ್ಲ. ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಅಂತ ಆಗ್ರಹಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನಡವಳಿಕೆ, ಹಿಂದೂ ವಿರೋಧಿ ಹೇಳಿಕೆ. ಸಿದ್ದರಾಮಯ್ಯ ಅವರು ಬಹಳ ಬಂಡರಿದ್ದಾರೆ. ಯಾವ ಕಾರಣಕ್ಕೂ ಅವರು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ. ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ಒಪ್ಪುತ್ತಾರಾ ಎನ್ನುವುದನ್ನು ತಿಳಿಸಬೇಕು. ಸಿದ್ದರಾಮಯ್ಯ ಅವರು ಹೇಳಿದ್ದು ಸರಿ ಎನ್ನುವುದಾದರೆ ಹೇಳಲಿ. ಡಿಕೆಶಿ ಅವರು ಈಗ ಬಾಯಿ ಬಿಡಬೇಕು ಎಂದರು. ಹಿಜಬ್ ವಿಚಾರದಲ್ಲಿ ಸಾಧು ಸಂತರನ್ನು ಸಿದ್ದರಾಮಯ್ಯ ಟೀಕಿಸಿದ್ದು ತಪ್ಪು ಎನ್ನುವುದಾದರೆ ಅವರನ್ನು ಪಕ್ಷದಿಂದ ವಜಾ ಮಾಡಿ. ಅವರು ವಿಪಕ್ಷ ನಾಯಕರಿದ್ದಾರೆ. ನಿಮ್ಮಿಂದ ವಜಾ ಮಾಡಲು ಸಾಧ್ಯವಾಗದಿದ್ದರೆ ಕೇಂದ್ರದ ನಾಯಕರ ಗಮನಕ್ಕೆ ತನ್ನಿ. ನಾನು ಸಹ ಸಿದ್ದರಾಮಯ್ಯ ಅವರನ್ನು ಪಕ್ಷದ

ಯುಪಿಯಲ್ಲಿ ಪಡಿತರ ಯೋಜನೆ ವಿಸ್ತರಣೆ- 2ನೇ ಅವಧಿಯಲ್ಲಿ ಯೋಗಿ ಸರ್ಕಾರದ ಮೊದಲ ನಿರ್ಧಾರ

Image
  ಯುಪಿಯಲ್ಲಿ ಪಡಿತರ ಯೋಜನೆ ವಿಸ್ತರಣೆ- 2ನೇ ಅವಧಿಯಲ್ಲಿ ಯೋಗಿ ಸರ್ಕಾರದ ಮೊದಲ ನಿರ್ಧಾರ ಲಕ್ನೋ:  ಉತ್ತರಪ್ರದೇಶದಲ್ಲಿ ಮುಂದಿನ ಮೂರು ತಿಂಗಳ ಕಾಲ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಜೂನ್‍ವರೆಗೆ ಉಚಿತ ಪಡಿತರ ಯೋಜನೆಯನ್ನು ಮುಂದುವರಿಸಲಾಗುತ್ತದೆ. ಇದರಿಂದಾಗಿ ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದುವರಿಸಲು ನಿರ್ಧರಿಸಿದ್ದೇವೆ. ಇದು ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯು ಪ್ರತಿ ಮನೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕಿ.ಗ್ರಾಂಗಳಷ್ಟು ಆಹಾರ ಧಾನ್ಯವನ್ನು ಒದಗಿಸುತ್ತದೆ. ಸಾಂಕ್ರಾಮಿಕ ರೋಗವು 2020ರಲ್ಲಿ ಬಂದಾಗ ಕೇಂದ್ರವು ಇದನ್ನು ಮೊದಲು ಜಾರಿಗೆ ತಂದಿತು ಎಂದು ತಿಳಿಸಿದರು. ಉತ್ತರಪ್ರದೇಶದಲ್ಲಿ ಮುಂದಿನ ಮೂರು ತಿಂಗಳ ಕಾಲ ಉಚಿತ ಪಡಿತರ ನೀಡಲಾಗುವುದು. ಬಡವರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳು ಜನರಿಗೆ ತಲುಪಬೇಕು ಎಂದು ನೂತನ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಹೇಳಿದರು. ಶುಕ್ರವಾರ ಲಕ್ನೋದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಾಖಲೆಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯ

ಕರ್ನಾಟಕ ಬಂದ್ ಮಾಡಿದ್ದಕ್ಕೆ ಕಟ್ಟಡ ಒಡೆಸಿದ್ರು- ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್

Image
  ಕರ್ನಾಟಕ ಬಂದ್ ಮಾಡಿದ್ದಕ್ಕೆ ಕಟ್ಟಡ ಒಡೆಸಿದ್ರು- ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಉಡುಪಿ:  ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿಯನ್ನು ತೆರವು ಮಾಡಿದ್ದಾರೆ. ಸಂವಿಧಾನ ಬದ್ಧ ಹೋರಾಟವನ್ನು ಮುಂದೆಯೂ ಬೆಂಬಲಿಸುವುದಾಗಿ ಉಡುಪಿ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಜೀರ್, ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮನ್ನು ಹದ್ದುಬಸ್ತಿನಲ್ಲಿಡುವ ವ್ಯವಸ್ಥೆಯಾಗುತ್ತಿದೆ. ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ. ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು. ನಿರಂತರ ಬಂದ್ ಮಾಡಿಸುವ ಪ್ಲ್ಯಾನ್ ಇರಬಹುದು ಎಂದರು. ತಿಂಗಳಿಗೆ 2 ಲಕ್ಷ ರುಪಾಯಿ ಬಾಡಿಗೆಯನ್ನು ಮಸೀದಿಗೆ ಕೊಡುತ್ತಿದ್ದೆವು. ಸರ್ಕಾರಕ್ಕೆ 37 ಸಾವಿರ ರುಪಾಯಿ ಜಿಎಸ್‍ಟಿ ಕಟ್ಟುತ್ತಿದ್ದೆವು. ಪರವಾನಿಗೆ ಪಡೆಯಲು ಕಡತಗಳಿಗೆ ಹಣ ಖರ್ಚು ಮಾಡಿದ್ದೇವೆ. ಹಿಜಬ್ ಹೋರಾಟದಲ್ಲಿ ಮಕ್ಕಳಿಗೆ ಸಂವಿಧಾನಬದ್ಧ ಹಕ್ಕು ಸಿಗಲೇಬೇಕು. ನಾವಾಗಿಯೇ ವಿವಾದ ಸೃಷ್ಟಿ ಮಾಡಿಲ್ಲ. ಸಂವಿಧಾನಬದ್ಧ ಹಕ್ಕು ಒದಗಿಸಲು ನಾವು ಸಹಾಯ ಮಾಡಿಯೇ ಮಾಡುತ್ತೇವೆ. ನಗರಸಭೆ ಅಧಿಕಾರಿಗಳಿಗೆ ಬಿಜೆಪಿಯವರ ಒತ್ತಡ ಇದೆ. ನಗರಸಭೆಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ಬೇಸರ ಹೊರ ಹಾಕಿದ್ದಾರೆ. ಉಡುಪಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ಇವೆ. ಎಲ್ಲಾ ಕಟ್ಟಡಗಳನ್ನು ತರ

GAIL ಸಂಸ್ಥೆಯ ವಿರುದ್ಧ ಬೆಂಗಳೂರಿನ ಸದಾನಂದ ನಗರ ನಿವಾಸಿಗಳ ಪ್ರತಿಭಟನೆ‌

Image
  GAIL ಸಂಸ್ಥೆಯ ವಿರುದ್ಧ ಬೆಂಗಳೂರಿನ ಸದಾನಂದ ನಗರ ನಿವಾಸಿಗಳ ಪ್ರತಿಭಟನೆ‌ ಬೆಂಗಳೂರು:  NGEF ಲೇಔಟ್ ಸದಾನಂದ ನಗರದ ಉದ್ಯಾನವನದಲ್ಲಿ GAIL ಸಂಸ್ಥೆ ಸ್ಥಾವರ ನಿರ್ಮಾಣಕ್ಕೆ ಮುಂದಾಗಿದ್ದು, ಜನಾಕ್ರೋಶ ಎದುರಾಗಿದೆ‌. ಇಲ್ಲಿನ ನಿವಾಸಿಗಳಿಗೆ ಮಕ್ಕಳಿಗೆ ವೃದ್ಧರಿಗೆ ಯುವಕರಿಗೆ ವಾಕಿಂಗ್ ಮಾಡಲು, ಆಟವಾಡಲು ಇರೋದು ಇದೊಂದೆ ಪಾರ್ಕ್ ಆಗಿದೆ. ಹೀಗಾಗಿ ಬೇರೆ ಸ್ಥಳದಲ್ಲಿ ಈಗಾಗಲೇ ಸ್ಥಾಪಿತವಾಗಿರುವ ಸ್ಥಾವರವನ್ನು ಈ ಪಾರ್ಕ್ ಜಾಗಕ್ಕೆ ಶಿಫ್ಟ್ ಮಾಡಲು ಹೊರಟಿರುವುದರ ವಿರುದ್ಧ ಜನ ತಿರುಗಿ ಬಿದ್ದಿದ್ದಾರೆ. ಈ ಸ್ಥಾವರ ನಿರ್ಮಾಣಕ್ಕೆ ಪಾರ್ಕ್‌ನಲ್ಲಿರುವ ಸುಮಾರು 30-50 ಮರಗಳ ತೆರವು ಮಾಡಬೇಕಾಗಿದೆ. ಹಸಿರನ್ನು ಅಪೋಷನ ತೆಗೆದುಕೊಂಡು ಈ ಸ್ಥಾವರ ನಿರ್ಮಾಣ ಬೇಕಾಗಿಲ್ಲ‌ ಉದ್ಯಾನವನ ಹೊರತುಪಡಿಸಿ ಬೇರೆ ಜಾಗದಲ್ಲಿ ನಿರ್ಮಾಣ ಮಾಡಲಿ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ‌. NGEF ಲೇಔಟ್ ಸದಾನಂದ ನಗರದ ಉದ್ಯಾನವನ ಬಿಡಿಎಗೆ ಸೇರಿದ್ದು, ಸದ್ಯ ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ.

ದೇವರಿಗೆ ಕೆಂಡವೇ ನೈವೇದ್ಯ – ಒಂಚೂರೂ ಸುಡಲ್ಲ ಮೈ

Image
  ದೇವರಿಗೆ ಕೆಂಡವೇ ನೈವೇದ್ಯ – ಒಂಚೂರೂ ಸುಡಲ್ಲ ಮೈ ಚಾಮರಾಜನಗರ:  ಜಾತ್ರೆ ಅಂದರೆ ಅಲ್ಲಿ ದೇವರಿಗೆ ನೈವೇದ್ಯ, ಜನಸ್ತೋಮ, ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ ಎಂಬ ಕಲ್ಪನೆ ಮೂಡುತ್ತದೆ. ಆದರೆ ಗಡಿ ಜಿಲ್ಲೆಯ ಊರೊಂದರಲ್ಲಿ ನಡೆಯುವ ಜಾತ್ರೆ ವಿಚಿತ್ರ. ಅದು ವಿಜ್ಞಾನಕ್ಕೂ ಸವಾಲು ಎಸೆಯುವಂತಿದೆ. ಹೌದು ಚಾಮರಾಜನಗರ ತಾಲೂಕು ತೆಳ್ಳನೂರು ಗ್ರಾಮದ ಉರುಕಾತಮ್ಮ ಜಾತ್ರೆ ಹಲವು ವೈಶಿಷ್ಟ್ಯತೆಯನ್ನು ಒಳಗೊಂಡಿದೆ. ಪೂಜಾರಿ ಮೈಮೇಲೆ ಕೆಂಡ ಸುರಿಯಲಾಗುತ್ತದೆ. ಸುಮಾರು ನೂರು ವರ್ಷಗಳಿಂದಲೂ ಈ ಆಚರಣೆ ಊರಲ್ಲಿ ಚಾಲ್ತಿಯಲ್ಲಿದೆ. ಕೊಂಡೋತ್ಸವದ ದಿನ ಬೆಳಗ್ಗೆಯೇ ಬೃಹತ್ ಗಾತ್ರದ ಸೌದೆಗಳನ್ನು ಒಟ್ಟುಗೂಡಿಸಿ ಸುಡಲಾಗುತ್ತದೆ. ಸಂಜೆ ಆರು ಗಂಟೆಗೆ ಪ್ರಾರಂಭವಾಗುವ ಕೊಂಡೋತ್ಸವದಲ್ಲಿ ಪೂಜಾರಿ ಮೈಮೇಲೆ ಸುಡುವ ಕೆಂಡ ಸುರಿಯಲಾಗುತ್ತದೆ. ಈ ಗ್ರಾಮ ದೇವತೆ ಮತ್ತೊಂದು ವಿಶಿಷ್ಟತೆಗೆ ಸಾಕ್ಷಿಯಾಗಿದೆ. ಈ ಊರಲ್ಲಿ ಹಾವು ಕಚ್ಚಿ ಸಾವನ್ನಪ್ಪಿರುವ ಉದಾಹರಣೆ ಇಲ್ಲ. ಎಂತಹದೇ ವಿಷ ಸರ್ಪ ಕಚ್ಚಿದರೂ ಎಷ್ಟೇ ದೂರವಿದ್ದರೂ ಸರಿ ತೆಳ್ಳನೂರಿನ ಉರುಕಾತಮ್ಮ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರೆ ವ್ಯಕ್ತಿ ಬದುಕುಳಿಯುತ್ತಾನೆ ಎಂಬ ಪ್ರತೀತಿ ಇದೆ. ಆಧುನಿಕ ದಿನಗಳಲ್ಲಿ ಈ ತರಹದ ಆಚರಣೆಗಳೆಲ್ಲ ಅವೈಜ್ಞಾನಿಕ ಅಂತಾರೆ. ಮೈಮೇಲೆ ಕೆಂಡ ಸುರಿದುಕೊಂಡರೆ ಸುಡಲ್ವಾ ಎನ್ನುವ ಜಿಜ್ಞಾಸೆಯೂ ಹುಟ್ಟುತ್ತದೆ. ಆದರೆ ಇದೆಲ್ಲದರ ನಡುವೆಯೂ ಚಮತ್ಕಾರ ನಡೆಯುತ್ತಿರುವುದು ಆಶ್ಚರ್ಯ ಹುಟ್ಟಿಸುತ್ತ

ರಫ್ತಿನಲ್ಲಿ ಗುಜರಾತ್ ಫಸ್ಟ್ – ಕರ್ನಾಟಕಕ್ಕೆ 3ನೇ ಸ್ಥಾನ

Image
  ರಫ್ತಿನಲ್ಲಿ ಗುಜರಾತ್ ಫಸ್ಟ್ – ಕರ್ನಾಟಕಕ್ಕೆ 3ನೇ ಸ್ಥಾನ ನವದೆಹಲಿ:  ಕಳೆದ ವರ್ಷ ಭಾರತ 30.5 ಲಕ್ಷ ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಿ ಸರ್ವಕಾಲಿಕ ದಾಖಲೆ ಬರೆದಿದೆ ಎನ್ನುವ ಸುದ್ದಿ ಬೆನ್ನಲ್ಲೆ ಇದೀಗ ಅತಿ ಹೆಚ್ಚು ವಸ್ತುಗಳನ್ನು ರಫ್ತು ಮಾಡಿದ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನ ಪಡೆದಿದೆ ಯಾವ ರಾಜ್ಯಗಳು ಯಾವ ಸ್ಥಾನದಲ್ಲಿದೆ?:  ನೀತಿ ಆಯೋಗ ಸಿದ್ಧಪಡಿಸಿರುವ ಸೂಚ್ಯಂಕ ಪ್ರಕಾರ 2021ರಲ್ಲಿ ಗುಜರಾತ್ ನಂಬರ್ 1, ಮಹಾರಾಷ್ಟ್ರ ನಂಬರ್ 2, ಹಾಗೂ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ರಾಜ್ಯಗಳು 2021-22ನೇ ಸಾಲಿನಲ್ಲಿ ವಿದೇಶಗಳಿಗೆ ಅತಿಹೆಚ್ಚು ರಫ್ತು ಮಾಡಿದ ರಾಜ್ಯಗಳಾಗಿವೆ. ರಫ್ತು ಸೂಚ್ಯಂಕವನ್ನು ಇನ್‍ಸ್ಟಿಟ್ಯೂಟ್ ಆಫ್ ಕಾಂಪಿಟೆಟಿವ್‍ನೆಸ್‍ನ ಜೊತೆಗೂಡಿ ನೀತಿ ಆಯೋಗ ಸಿದ್ಧಪಡಿಸಿದೆ. ವ್ಯಾಪಾರ ನೀತಿ ಆಯೋಗ ಸಿದ್ಧಪಡಿಸಿದ ವ್ಯಾಪಾರ ನೀತಿ, ವಾಣಿಜ್ಯ ಪರಿಸರ, ರಫ್ತು ಪರಿಸರ ಹಾಗೂ ರಫ್ತು ಸಾಧನೆ ಎನ್ನುವ ನಾಲ್ಕು ಅಂಶಗಳನ್ನು ಪ್ರಮುಖವಾಗಿ ಇಲ್ಲಿ ಪರಿಗಣಿಸಲಾಗಿದೆ. ರಫ್ತು ಉತ್ತೇಜನಾ ನೀತಿ ಮತ್ತು ಉದ್ದಿಮೆಗಳನ್ನು ನಡೆಸಲು ಇರುವ ವಾತಾವರಣದಂತಹ 11 ಅಂಶಗಳನ್ನೂ ಪರಿಗಣಿಸಲಾಗಿದೆ.  ಈ ಎಲ್ಲ ಅಂಶಗಳಲ್ಲಿ ಒಟ್ಟಾರೆಯಾಗಿ ಗುಜರಾತ್ ಸತತ 2ನೇ ವರ್ಷವೂ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ನಂತರದ ಸ್ಥಾನಗಳನ್ನು ಅನುಕ್ರಮವಾಗಿ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಹರಿಯಾಣ, ಉತ್ತರಪ್ರದೇಶ, ಮಧ್ಯಪ್ರದೇ

ಒಂದೇ ವಾರದಲ್ಲಿ ಸತತ ನಾಲ್ಕನೇ ದಿನವು ಭಾರೀ ಏರಿಕೆ ಕಂಡ ಪೆಟ್ರೋಲ್, ಡಿಸೇಲ್

Image
  ಒಂದೇ ವಾರದಲ್ಲಿ ಸತತ ನಾಲ್ಕನೇ ದಿನವು ಭಾರೀ ಏರಿಕೆ ಕಂಡ ಪೆಟ್ರೋಲ್, ಡಿಸೇಲ್ ನವದೆಹಲಿ:  80 ಪೈಸೆಯಂತೆ ಸತತ ನಾಲ್ಕು ದಿನಗಳಿಂದ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಆಗುತ್ತಲೇ ಬರುತ್ತಿದೆ. ಪಂಚರಾಜ್ಯ ಚುನಾವಣೆ ನಂತರ ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಒಂದೇ ವಾರದಲ್ಲಿ ನಾಲ್ಕನೇ ಬಾರಿ ತೈಲ ದರಗಳು ಏರಿಕೆಯಾದಂತಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 103.09 ರೂ ಇದ್ದ, ಪೆಟ್ರೋಲ್ ದರ 103.91 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‍ಗೆ 87.35 ರೂ ಇದ್ದ, ಡೀಸೆಲ್ ದರ ರೂ. 88.12ಗೆ ಏರಿಕೆಯಾಗಿದೆ. ದೆಹಲಿಯಲ್ಲಿ 80 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್‍ಗೆ ರೂ.98.61 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.89.87 ದಾಖಲಾಗಿದೆ.ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ.ಪೆಟ್ರೋಲ್ ದರ ರೂ.113.35, ಡೀಸೆಲ್ ರೂ.97.55 ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.47 ರೂಪಾಯಿ ಇದೆ. ಹೈದರಾಬಾದ್‍ನಲ್ಲಿ ಲೀಟರ್‍ಗೆ ಪೆಟ್ರೋಲ್ ಬೆಲೆ 111.78ರೂ ಹಾಗೂ ಡೀಸೆಲ್‍ಗೆ 98.08ರೂ ದಾಖಲಾಗಿದೆ. ಲಖನೌದಲ್ಲಿ ಪೆಟ್ರೋಲ್ ದರ 98.44ರೂ ಹಾಗೂ ಡೀಸೆಲ್ ದರ 90 ರೂಗೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆ

ಬೆಂಗಳೂರಿನಲ್ಲಿ ಹಿಜಬ್‍ಗಾಗಿ ಪ್ರತಿಭಟನೆ – ಪೊಲೀಸರಿಂದ ಕಾನೂನು ಕ್ರಮದ ಎಚ್ಚರಿಕೆ

Image
  ಬೆಂಗಳೂರಿನಲ್ಲಿ ಹಿಜಬ್‍ಗಾಗಿ ಪ್ರತಿಭಟನೆ – ಪೊಲೀಸರಿಂದ ಕಾನೂನು ಕ್ರಮದ ಎಚ್ಚರಿಕೆ ಬೆಂಗಳೂರು:  ಮುಂದಿನ ವಾರದಿಂದ ಪರೀಕ್ಷೆಗಳು ಆರಂಭವಾಗುತ್ತಿರುವ ಬೆನ್ನಲ್ಲೇ ಹಿಜಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿನಿಯರು ಮುಂದಾಗಿದ್ದಾರೆ. ಈಗಾಗಲೇ ಉಡುಪಿಯ ವಿದ್ಯಾರ್ಥಿನಿಯರು ಬೆಂಗಳೂರಿಗೆ ಆಗಮಿಸಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಮಹಿಳಾ ಸಂಘಟನೆ ಶುಕ್ರವಾರ ಬೆಳಗ್ಗೆ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆಗೆ ಅನುಮತಿ ನೀಡುವಂತೆ ಕೋರಿ ಪೊಲೀಸರ ಬಳಿ ಮನವಿ ಮಾಡಿದ್ದಾರೆ.  ಆದರೆ ಪ್ರತಿಭಟನೆಗೆ ಪೊಲೀಸರು ಒಪ್ಪಿಗೆ ಸೂಚಿಸಿಲ್ಲ. ಜೊತೆಗೆ ಪ್ರತಿಭಟಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಡಕ್ ಆಗಿ ಹೇಳಿದ್ದಾರೆ. ಪೊಲೀಸರು ಅನುಮತಿ ನೀಡದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಫ್ರೀಡಂಪಾರ್ಕ್ ನಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನೆಯಿದೆ ಎನ್ನುವುದರ ಕುರಿತು ಮೆಸೇಜ್ ಹರಿದಾಡುತ್ತಿದೆ. ಜೊತೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಲ್ಲಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ. ಇದರಿಂದಾಗಿ ಬೆಂಗಳೂರು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಅನುಮತಿ ನೀಡಿಲ್ಲ ಯಾಕೆ?:  ಪ್ರತಿಭಟನೆ ನಡೆಸಬೇಕಾದರೆ 5 ದಿನ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ನಿನ್ನೆ ಬೆಳಗ್ಗೆ ಅರ್ಜಿ ಸಲ್ಲಿಸಿ ಪ್ರತಿಭಟನೆಗೆ ಒಂದೇ ದಿನಕ್ಕೆ ಅವಕಾಶ ಕೇಳಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಅವ

RRR ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್ – ಫಸ್ಟ್ ಡೇ ಕಲೆಕ್ಷನ್ ಎಷ್ಟು ಗೊತ್ತಾ?

Image
  RRR ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್ – ಫಸ್ಟ್ ಡೇ ಕಲೆಕ್ಷನ್ ಎಷ್ಟು ಗೊತ್ತಾ? ಟಾ ಲಿವುಡ್ ನಟ ರಾಮ್‍ಚರಣ್ ತೇಜ ಹಾಗೂ ಜೂ.ನಿಯರ್ ಎನ್‍ಟಿಆರ್ ಅಭಿನಯದ ಬಹುನಿರೀಕ್ಷಿತ ಆರ್‌ಆರ್‌ಆರ್ ಸಿನಿಮಾ ರಿಲೀಸ್ ಆದ ಮೊದಲ ದಿನವೇ ಬಾಕ್ಸ್ ಆಫೀಸ್ ಧೂಳೆಬ್ಬಿಸಿದೆ. ಬಾಹುಬಲಿಯ ಯಶಸ್ಸಿನ ಬಳಿಕ ನಿರ್ದೇಶಕ ರಾಜಮೌಳಿ ಆ್ಯಕ್ಷನ್ ಕಟ್ ಹೇಳಿರುವ ಆರ್‌ಆರ್‌ಆರ್ ಸಿನಿಮಾ ಬಿಡುಗಡೆಗೊಂಡಿದ್ದು, 500 ಕೋಟಿ ಬಿಗ್ ಬಜೆಟ್‍ನಲ್ಲಿ ತಯಾರಾಗಿರುವ ಈ ಸಿನಿಮಾ ವಿಶ್ವಾದ್ಯಂತ ನಾಲ್ಕು ಸಾವಿರಕ್ಕೂ ಹೆಚ್ಚು ಸ್ಕ್ರೀನ್‍ಗಳಲ್ಲಿ ತೆರೆಕಂಡಿದೆ. ದುಬಾರಿ ವೆಚ್ಚದಲ್ಲಿ ನಿರ್ಮಾ ಆರ್‌ಆರ್‌ಆರ್ ಸಿನಿಮಾ ನೋಡಿ ಪ್ರೇಕ್ಷಕರು ಫಿದಾ ಆಗಿದ್ದು, ಮೊದಲ ದಿನವೇ ಹಿಂದಿಯಲ್ಲಿ 18 ಕೋಟಿ ರೂ. ಗಳಿಸಿದೆ ಮತ್ತು ಎಲ್ಲಾ ಸಿನಿಮಾದ ದಾಖಲೆಗಳನ್ನು ಬ್ರೇಕ್ ಮಾಡಿ ತೆಲುಗು ರಾಜ್ಯಗಳಲ್ಲಿ ಆರ್‌ಆರ್‌ಆರ್ 100 ಕೋಟಿ ರೂ.ಗೂ ಹೆಚ್ಚು ಗಳಿಸಿದೆ ಎಂದು ಸಿನಿಮಾ ಬಾಕ್ಸ್ ಆಫೀಸ್ ವಿಶ್ಲೇಷಕ ರಮೇಶ್ ಬಾಲಾ ಅವರು ತಮ್ಮ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ಜೊತೆಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‍ನಲ್ಲೂ ಆರ್‌ಆರ್‌ಆರ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಯುರೋಪ್‍ನಲ್ಲಿ 2.40 ಕೋಟಿ ಗಳಿಸಿದೆ. ಈಗಾಗಲೇ 200ಕ್ಕೂ ಹೆಚ್ಚು ಕೋಟಿ ರೂ.ವನ್ನು ಜೋಳಿಗೆ ಹಾಕಿಕೊಂಡಿರುವ ಆರ್‌ಆರ್‌ಆರ್ ಸಿನಿಮಾ ಮೇಲೆ ಓವರಾಲ್ 800 ಕೋಟಿ ಗಳಿಕೆಯ ನಿರೀಕ್ಷೆ ಇದೆ.  ಆರ್‌ಆರ್‌ಆರ್ ತೆಲುಗು ಸ್ವಾತಂತ್ರ್ಯ ಹೋರಾಟಗಾರರಾ