ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ಸಕಲ ಸಿದ್ಧತೆ – ಗ್ರೀನ್ ಗೇಮ್ಸ್‌ಗೆ ಸಜ್ಜಾದ ಬೆಂಗಳೂರು
ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ಸಕಲ ಸಿದ್ಧತೆ – ಗ್ರೀನ್ ಗೇಮ್ಸ್‌ಗೆ ಸಜ್ಜಾದ ಬೆಂಗಳೂರು ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಏಪ್ರಿಲ್ 1 ರಂದು ಲೋಗೋ, ಥೀಮ್ ಸಾಂಗ್ ಹಾಗೂ ಜೆರ್ಸಿ ಬಿಡುಗಡೆಗೊಳಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಎರಡನೇ ಆವೃತ್ತಿಯನ್ನು ಆಯೋಜಿಸುವುದು ನಮ್ಮ ಕರ್ನಾಟಕಕ್ಕೆ ಸಿಕ್ಕಿರುವುದು ಹೆಮ್ಮೆಯ ವಿಷಯ. ಏಪ್ರಿಲ್ 24 ರಿಂದ ಮೇ 03 ವರೆಗೂ ನಡೆಯಲಿದ್ದು, ಏಪ್ರಿಲ್ 1 ರಂದು ಕ್ರೀಡಾಕೂಟದ ಲೋಗೋ, ಥೀಮ್ ಸಾಂಗ್, ಜೆರ್ಸಿ, ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗುತ್ತದೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಯುವಜನ ಮತ್ತು ಕ್ರೀಡೆ, ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಕೇಂದ್ರ ಗೃಹ ಇಲಾಖೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಸಚಿವ ನಿಸಿತ್ ಪ್ರಾಮಾಣಿಕ್, ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು. ಏಪ್ರಿಲ್ 24 ರಂದು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಉದ್ಘಾಟನೆಗೆ ಉಪ ರಾಷ್